Genesis 47:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಸೇಫನು ಫರೋಹನ ಬಳಿಗೆ ಹೋಗಿ, “ನನ್ನ ತಂದೆಯೂ ನನ್ನ ಸಹೋದರರೂ ಅವರೆಲ್ಲರ ಕುಟುಂಬಗಳವರೂ ಇಲ್ಲಿಗೆ ಬಂದಿದ್ದಾರೆ. ಅವರು ತಮ್ಮ ಎಲ್ಲಾ ಪಶುಗಳನ್ನೂ ಕಾನಾನಿನಲ್ಲಿ ಪಡೆದಿದ್ದ ಪ್ರತಿಯೊಂದನ್ನೂ ತೆಗೆದುಕೊಂಡು ಬಂದಿದ್ದಾರೆ. ಈಗ ಅವರು ಗೋಷೆನ್ ಪ್ರಾಂತ್ಯದಲ್ಲಿ ಇದ್ದಾರೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೋಸೇಫನು ಫರೋಹನ ಬಳಿಗೆ ಹೋಗಿ, “ನನ್ನ ತಂದೆಯೂ, ಅಣ್ಣತಮ್ಮಂದಿರೂ, ಕುರಿದನಗಳನ್ನೂ, ಸಮಸ್ತ ಆಸ್ತಿಯನ್ನೂ ತೆಗೆದುಕೊಂಡು ಕಾನಾನ್ ದೇಶದಿಂದ ಬಂದು ಗೋಷೆನ್ ಸೀಮೆಯಲ್ಲಿ ಉಳಿದುಕೊಂಡಿದ್ದಾರೆ” ಎಂದನು.
Kannada BSI Bible 2016
ಯೋಸೇಫನು ಬಂದು ಫರೋಹನಿಗೆ-- ನನ್ನ ತಂದೆಯೂ ನನ್ನ ಸಹೋದರರೂ ತಮ್ಮ ಕುರಿ ದನಗಳನ್ನು ತಮಗಿದ್ದ ಎಲ್ಲವುಗಳನ್ನು ತೆಗೆದುಕೊಂಡು ಕಾನಾನ್‌ದೇಶದಿಂದ ಬಂದಿದ್ದಾರೆ. ಇಗೋ, ಅವರು ಗೋಷೆನ್ ಸೀಮೆಯಲ್ಲಿ ಇದ್ದಾರೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೋಸೇಫನು ಫರೋಹನ ಬಳಿಗೆ ಹೋಗಿ - ನನ್ನ ತಂದೆಯೂ ಅಣ್ಣತಮ್ಮಂದಿರೂ ದನಕುರಿಗಳನ್ನೂ ಸಮಸ್ತ ಆಸ್ತಿಯನ್ನೂ ತೆಗೆದುಕೊಂಡು ಕಾನಾನ್ ದೇಶದಿಂದ ಬಂದು ಗೋಷೆನ್ ಸೀಮೆಯಲ್ಲಿದ್ದಾರೆಂದು ಹೇಳಿ
Kannada Bible (KNCL) BSI 2016
ಜೋಸೆಫನು ಫರೋಹನ ಬಳಿಗೆ ಬಂದು, “ನನ್ನ ತಂದೆಯೂ ಸಹೋದರರೂ ದನಕುರಿಗಳನ್ನು ಹಾಗೂ ಎಲ್ಲ ಆಸ್ತಿಪಾಸ್ತಿಯನ್ನು ತೆಗೆದುಕೊಂಡು ಕಾನಾನ್ ನಾಡಿನಿಂದ ಗೋಷೆನ್ ಪ್ರಾಂತ್ಯಕ್ಕೆ ಬಂದಿದ್ದಾರೆ,” ಎಂದು ತಿಳಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಸೇಫನು ಹೋಗಿ ಫರೋಹನಿಗೆ, “ನನ್ನ ತಂದೆಯೂ, ನನ್ನ ಸಹೋದರರೂ ತಮ್ಮ ಕುರಿದನಗಳನ್ನೂ, ತಮಗಿದ್ದ ಎಲ್ಲವುಗಳನ್ನೂ ತೆಗೆದುಕೊಂಡು ಕಾನಾನ್ ದೇಶದಿಂದ ಬಂದಿದ್ದಾರೆ. ಅವರು ಗೋಷೆನ್ ಪ್ರಾಂತದಲ್ಲಿ ಇದ್ದಾರೆ,” ಎಂದನು.