Genesis 47:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಫರೋಹನು ಹೇಳಿದಂತೆಯೇ ಯೋಸೇಫನು ಮಾಡಿದನು. ಅವನು ತನ್ನ ತಂದೆಗೂ ಸಹೋದರರಿಗೂ ಈಜಿಪ್ಟಿನಲ್ಲಿ ವಾಸಿಸಲು ಉತ್ತಮವಾದ ಪ್ರದೇಶವನ್ನು ಕೊಟ್ಟನು. ಅದು ರಮ್ಸೇಸ್ ಪಟ್ಟಣದ ಸಮೀಪದಲ್ಲಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫರೋಹನ ಅಪ್ಪಣೆಯ ಮೇರೆಗೆ ಯೋಸೇಫನು ತನ್ನ ತಂದೆಗೂ ಅಣ್ಣತಮ್ಮಂದಿರಿಗೂ ಐಗುಪ್ತ ದೇಶದಲ್ಲಿ ವಾಸಮಾಡಲು ಉತ್ತಮವಾಗಿದ್ದ ರಮ್ಸೇಸ್ ಪ್ರದೇಶದಲ್ಲಿ ಸ್ವತ್ತು ಕೊಟ್ಟನು.
Kannada BSI Bible 2016
ಯೋಸೇಫನು ತನ್ನ ತಂದೆಗೂ ತನ್ನ ಸಹೋದರ ರಿಗೂ ನಿವಾಸವನ್ನು ಕೊಟ್ಟು ಫರೋಹನ ಅಪ್ಪಣೆಯ ಪ್ರಕಾರ ಐಗುಪ್ತದೇಶದ ಉತ್ತಮವಾದದ್ದರಲ್ಲಿ ರಮ್ಸೇಸ್ ಸೀಮೆಯಲ್ಲಿ ಸ್ವಾಸ್ಥ್ಯವನ್ನು ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಫರೋಹನ ಅಪ್ಪಣೆಯ ಮೇರೆಗೆ ಯೋಸೇಫನು ತನ್ನ ತಂದೆಗೂ ಅಣ್ಣತಮ್ಮಂದಿರಿಗೂ ಐಗುಪ್ತ ದೇಶದಲ್ಲಿ ವಾಸಸ್ಥಾನವನ್ನು ನೇವಿುಸಿ ಅದರೊಳಗೆ ಉತ್ತಮವಾಗಿದ್ದ ರಮ್ಸೇಸ್ ಪ್ರದೇಶದಲ್ಲಿ ಸ್ವಾಸ್ತಿಯನ್ನು ಕೊಟ್ಟನು.
Kannada Bible (KNCL) BSI 2016
ಫರೋಹನ ಅಪ್ಪಣೆಯ ಮೇರೆಗೆ ಜೋಸೆಫನು ತನ್ನ ತಂದೆಗೂ ಅಣ್ಣತಮ್ಮಂದಿರಿಗೂ ಈಜಿಪ್ಟಿನಲ್ಲಿ ವಾಸಸ್ಥಾನವನ್ನು ನೇಮಿಸಿ, ಅದರಲ್ಲಿ ಉತ್ತಮವಾಗಿದ್ದ ರಮ್ಸೇಸ್ ಪ್ರದೇಶದಲ್ಲಿ ಸೊತ್ತನ್ನು ಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಸೇಫನು ತನ್ನ ತಂದೆಗೂ, ತನ್ನ ಸಹೋದರರಿಗೂ ನಿವಾಸವನ್ನು ಕೊಟ್ಟು, ಫರೋಹನ ಅಪ್ಪಣೆಯ ಪ್ರಕಾರ, ಅವರಿಗೆ ಈಜಿಪ್ಟ್ ದೇಶದ ಉತ್ತಮವಾದ ರಮ್ಸೇಸ್ ಸೀಮೆಯ ಸ್ವತ್ತನ್ನು ಕೊಟ್ಟನು.