Genesis 47:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬರಗಾಲವು ಹೆಚ್ಚು ಭೀಕರವಾಯಿತು. ದೇಶದಲ್ಲಿ ಎಲ್ಲಿಯೂ ಆಹಾರ ಇರಲಿಲ್ಲ. ಈಜಿಪ್ಟ್ ಮತ್ತು ಕಾನಾನ್ ದೇಶಗಳು ಕೆಟ್ಟಕಾಲದಿಂದ ಬಡದೇಶಗಳಾದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬರವು ಬಹು ಘೋರವಾಗಿದ್ದುದರಿಂದ ದೇಶದ ಯಾವ ಭಾಗದಲ್ಲಿಯೂ ಆಹಾರ ಸಿಕ್ಕುತ್ತಿರಲಿಲ್ಲ. ಆ ಬರದ ನಿಮಿತ್ತ ಐಗುಪ್ತ ದೇಶವು ಹಾಗೂ ಕಾನಾನ್‌ ದೇಶವು ಕ್ಷಾಮದಿಂದ ಬರಡಾದವು.
Kannada BSI Bible 2016
ಆದರೆ ಬರವು ಅತಿ ಘೋರವಾಗಿದ್ದರಿಂದ ದೇಶದಲ್ಲೆಲ್ಲಾ ಆಹಾರ ಇರಲಿಲ್ಲ. ಐಗುಪ್ತದೇಶವೂ ಕಾನಾನ್‌ದೇಶವೂ ಕ್ಷಾಮದಿಂದ ಕ್ಷೀಣವಾದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬರವು ಬಹು ಘೋರವಾಗಿದ್ದದರಿಂದ ದೇಶದ ಯಾವ ಭಾಗದಲ್ಲಿಯೂ ಆಹಾರ ಸಿಕ್ಕುತ್ತಿರಲಿಲ್ಲ. ಆ ಬರದ ನಿವಿುತ್ತ ಐಗುಪ್ತದೇಶದವರಿಗೂ ಕಾನಾನ್‍ದೇಶದವರಿಗೂ ದಿಕ್ಕುತೋರದೆ ಹೋಯಿತು.
Kannada Bible (KNCL) BSI 2016
ಬರವು ಬಹು ಘೋರವಾಗಿತ್ತು. ದೇಶದ ಯಾವ ಭಾಗದಲ್ಲೂ ಆಹಾರ ಸಿಕ್ಕುತ್ತಿರಲಿಲ್ಲ. ಈ ನಿಮಿತ್ತ ಈಜಿಪ್ಟ್ ದೇಶವೂ ಕಾನಾನ್ ನಾಡೂ ಹಾಗೆ ಸೊರಗಿಹೋಗುತ್ತಿದ್ದುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಬರವು ಅತಿ ಘೋರವಾಗಿದ್ದದ್ದರಿಂದ ದೇಶದಲ್ಲೆಲ್ಲಾ ಆಹಾರ ಇರಲಿಲ್ಲ. ಈಜಿಪ್ಟ್ ದೇಶವೂ, ಕಾನಾನ್ ದೇಶವೂ ಕ್ಷಾಮದಿಂದ ಕ್ಷೀಣವಾದವು.