Genesis 47:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಜಿಪ್ಟ್ ಮತ್ತು ಕಾನಾನ್ ದೇಶಗಳ ಜನರು ಧಾನ್ಯಗಳನ್ನು ಕೊಂಡುಕೊಂಡರು. ಯೋಸೇಫನು ಹಣವನ್ನು ಉಳಿಸಿ ಫರೋಹನ ಭಂಡಾರಕ್ಕೆ ಸೇರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಸೇಫನು ಜನರಿಗೆ ಧಾನ್ಯವನ್ನು ಮಾರುತ್ತಾ ಐಗುಪ್ತ ದೇಶದಲ್ಲಿಯೂ, ಕಾನಾನ್‌ ದೇಶದಲ್ಲಿಯೂ ಇದ್ದ ಎಲ್ಲಾ ಹಣವನ್ನು ಕೂಡಿಸಿಕೊಂಡು ಫರೋಹನ ಬೊಕ್ಕಸದೊಳಗೆ ತುಂಬಿದನು.
Kannada BSI Bible 2016
ಆಗ ಯೋಸೇಫನು ಐಗುಪ್ತದೇಶದಲ್ಲಿಯೂ ಕಾನಾನ್‌ದೇಶದಲ್ಲಿಯೂ ಜನರು ಕೊಂಡುಕೊಂಡ ಧಾನ್ಯಕ್ಕೆ ಬದಲಾಗಿ ಕೊಟ್ಟ ಹಣವನ್ನೆಲ್ಲಾ ಕೂಡಿಸಿ ಅದನ್ನು ಫರೋಹನ ಮನೆಗೆ ತಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಸೇಫನು ಜನರಿಗೆ ಧಾನ್ಯವನ್ನು ಮಾರುತ್ತಾ ಐಗುಪ್ತದೇಶದಲ್ಲಿಯೂ ಕಾನಾನ್‍ದೇಶದಲ್ಲಿಯೂ ಇದ್ದ ಎಲ್ಲಾ ಹಣವನ್ನೂ ಸೆಳಕೊಂಡು ಫರೋಹನ ಬೊಕ್ಕಸದೊಳಗೆ ತುಂಬಿದನು.
Kannada Bible (KNCL) BSI 2016
ಜೋಸೆಫನು ಈಜಿಪ್ಟ್ ದೇಶದವರಿಗೂ ಕಾನಾನ್ ನಾಡಿಗರಿಗೂ ದವಸಧಾನ್ಯ ಮಾರಿ ಬಂದ ಹಣದಿಂದ ಫರೋಹನ ಬೊಕ್ಕಸವನ್ನು ತುಂಬಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೋಸೇಫನು ಈಜಿಪ್ಟ್ ದೇಶದಲ್ಲಿಯೂ, ಕಾನಾನ್ ದೇಶದಲ್ಲಿಯೂ ಜನರು ಕೊಂಡುಕೊಂಡ ಧಾನ್ಯಕ್ಕೆ ಬದಲಾಗಿ ಕೊಟ್ಟ ಹಣವನ್ನೆಲ್ಲಾ ಕೂಡಿಸಿ, ಅದನ್ನು ಫರೋಹನ ಮನೆಗೆ ತಂದನು.