Genesis 47:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸ್ವಲ್ಪ ಸಮಯದ ನಂತರ, ಈಜಿಪ್ಟ್ ಮತ್ತು ಕಾನಾನ್ ದೇಶಗಳಲ್ಲಿದ್ದ ಜನರಲ್ಲಿ ಹಣವು ಉಳಿದಿರಲಿಲ್ಲ. ಆದ್ದರಿಂದ ಈಜಿಪ್ಟಿನ ಜನರು ಯೋಸೇಫನ ಬಳಿಗೆ ಹೋಗಿ, “ದಯವಿಟ್ಟು ನಮಗೆ ಆಹಾರವನ್ನು ಕೊಡು. ನಮ್ಮ ಹಣವೆಲ್ಲ ಮುಗಿದುಹೋಗಿದೆ. ನಾವು ಊಟ ಮಾಡದಿದ್ದರೆ ನಿನ್ನೆದುರಿನಲ್ಲೇ ಸಾಯುತ್ತೇವೆ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐಗುಪ್ತ ದೇಶದಲ್ಲಿಯೂ, ಕಾನಾನ್‌ ದೇಶದಲ್ಲಿಯೂ ಇದ್ದ ಹಣವೆಲ್ಲಾ ಮುಗಿದುಹೋದ ನಂತರ ಐಗುಪ್ತರೆಲ್ಲರೂ ಯೋಸೇಫನ ಬಳಿಗೆ ಬಂದು, “ನಮ್ಮ ಹಣವೆಲ್ಲಾ ಮುಗಿದುಹೋಯಿತು; ನೀನು ನಮಗೆ ಆಹಾರವನ್ನು ಕೊಡಬೇಕು; ನಾವು ನಿನ್ನ ಮುಂದೆ ಸತ್ತರೆ ಪ್ರಯೋಜನವೇನು?” ಎಂದು ಹೇಳಿದರು.
Kannada BSI Bible 2016
ಐಗುಪ್ತ ದೇಶದಲ್ಲಿಯೂ ಕಾನಾನ್‌ದೇಶದಲ್ಲಿಯೂ ಹಣವು ಮುಗಿದಾಗ ಐಗುಪ್ತ್ಯರೆಲ್ಲರೂ ಯೋಸೇಫನ ಬಳಿಗೆ ಬಂದು--ನಮಗೆ ರೊಟ್ಟಿಯನ್ನು ಕೊಡು, ನಾವು ನಿನ್ನ ಮುಂದೆ ಯಾಕೆ ಸಾಯಬೇಕು? ಯಾಕಂದರೆ ಹಣವೆಲ್ಲಾ ತೀರಿತು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಐಗುಪ್ತದೇಶದಲ್ಲಿಯೂ ಕಾನಾನ್ ದೇಶದಲ್ಲಿಯೂ ಇದ್ದ ಹಣವೆಲ್ಲಾ ಮುಗಿದುಹೋದ ನಂತರ ಐಗುಪ್ತ್ಯರೆಲ್ಲರೂ ಯೋಸೇಫನ ಬಳಿಗೆ ಬಂದು - ನಮ್ಮ ಹಣವು ಮುಗಿದು ಹೋಯಿತು; ನೀನು [ಧರ್ಮವಾಗಿಯೇ] ಆಹಾರಕೊಡಬೇಕು; ನಾವು ನಿನ್ನ ಮುಂದೆ ಸತ್ತರೆ ಪ್ರಯೋಜನವೇನು ಎಂದು ಹೇಳಿದರು.
Kannada Bible (KNCL) BSI 2016
ಈಜಿಪ್ಟಿನ ಹಾಗೂ ಕಾನಾನಿನ ಹಣವೆಲ್ಲ ಮುಗಿದುಹೋದಾಗ ಈಜಿಪ್ಟಿನವರು ಜೋಸೆಫನ ಬಳಿಗೆ ಬಂದು, “ನಾವೇಕೆ ನಿಮ್ಮ ಕಣ್ಮುಂದೆ ಸಾಯಬೇಕು? ನಮಗೆ ಆಹಾರ ಕೊಡಿ, ನಮ್ಮ ಹಣ ಮುಗಿದುಹೋಯಿತು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಜಿಪ್ಟ್ ದೇಶದಲ್ಲಿಯೂ, ಕಾನಾನ್ ದೇಶದಲ್ಲಿಯೂ ಹಣವು ಮುಗಿದಾಗ, ಈಜಿಪ್ಟಿನವರೆಲ್ಲರೂ ಯೋಸೇಫನ ಬಳಿಗೆ ಬಂದು, “ನಮಗೆ ಆಹಾರವನ್ನು ಕೊಡು, ನಾವು ನಿನ್ನ ಮುಂದೆ ಏಕೆ ಸಾಯಬೇಕು? ಏಕೆಂದರೆ ಹಣವೆಲ್ಲಾ ತೀರಿತು,” ಎಂದರು.