Genesis 47:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದಕ್ಕೆ ಯೋಸೇಫನು, “ನಿಮ್ಮ ದನಕರುಗಳನ್ನು ನನಗೆ ಕೊಡಿರಿ, ನಾನು ನಿಮಗೆ ಆಹಾರವನ್ನು ಕೊಡುತ್ತೇನೆ” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಯೋಸೇಫನು, “ನಿಮ್ಮ ಕುರಿದನಗಳನ್ನು ತೆಗೆದುಕೊಂಡು ಬನ್ನಿರಿ; ಹಣವಿಲ್ಲದಿದ್ದರೆ ಕುರಿದನಗಳನ್ನು ತೆಗೆದುಕೊಂಡು, ಧಾನ್ಯವನ್ನು ನಿಮಗೆ ಕೊಡುತ್ತೇನೆ” ಎಂದನು.
Kannada BSI Bible 2016
ಆಗ ಯೋಸೇಫ ನು--ನಿಮ್ಮ ದನಗಳನ್ನು ತಕ್ಕೊಂಡು ಬನ್ನಿರಿ, ಹಣ ತೀರಿದ್ದೇಯಾದರೆ ನಿಮ್ಮ ದನಗಳಿಗೆ ಬದಲಾಗಿ (ಧಾನ್ಯವನ್ನು) ಕೊಡುತ್ತೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಯೋಸೇಫನು - ನಿಮ್ಮ ದನಗಳನ್ನು ತನ್ನಿರಿ; ಹಣವಿಲ್ಲದಿದ್ದರೆ ದನಗಳನ್ನು ತೆಗೆದುಕೊಂಡು ಧಾನ್ಯವನ್ನು ಕೊಡಿಸುತ್ತೇನೆ ಅಂದನು.
Kannada Bible (KNCL) BSI 2016
ಜೋಸೆಫನು, “ನಿಮ್ಮ ದನಕರುಗಳನ್ನು ತನ್ನಿ, ಹಣವಿಲ್ಲದಿದ್ದರೆ ದನಕರುಗಳನ್ನು ತೆಗೆದುಕೊಂಡು ಧಾನ್ಯ ಕೊಡಿಸುತ್ತೇನೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೋಸೇಫನು, “ನಿಮ್ಮ ಪಶುಗಳನ್ನು ತೆಗೆದುಕೊಂಡು ಬನ್ನಿರಿ, ಹಣ ತೀರಿದ್ದೇಯಾದರೆ, ನಿಮ್ಮ ಪಶುಗಳಿಗೆ ಬದಲಾಗಿ ಧಾನ್ಯವನ್ನು ಕೊಡುತ್ತೇನೆ,” ಎಂದನು.