Genesis 47:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಯೋಸೇಫನು ಈಜಿಪ್ಟಿನ ಎಲ್ಲಾ ಜಮೀನನ್ನು ಫರೋಹನಿಗಾಗಿ ಕೊಂಡುಕೊಂಡನು. ಹಸಿವೆಯಿಂದಾಗಿ ಈಜಿಪ್ಟಿನ ಎಲ್ಲಾ ಜನರು ಯೋಸೇಫನಿಗೆ ತಮ್ಮ ಜಮೀನುಗಳನ್ನು ಮಾರಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಯೋಸೇಫನು ಐಗುಪ್ತರಿಂದ ಎಲ್ಲಾ ಸಾಗುವಳಿಯ ಭೂಮಿಯನ್ನು ಫರೋಹನಿಗಾಗಿ ಕೊಂಡುಕೊಂಡನು. ಪ್ರತಿಯೊಬ್ಬ ಐಗುಪ್ತನ್ನು ತನ್ನ ಹೊಲಗದ್ದೆಗಳನ್ನು ಮಾರಿಬಿಟ್ಟನು. ಬರವು ಐಗುಪ್ತದಲ್ಲಿ ಘೋರವಾಗಿದ್ದದರಿಂದ ಅವರೆಲ್ಲರ ಭೂಮಿಯು ಫರೋಹನ ವಶವಾಯಿತು.
Kannada BSI Bible 2016
ಆಗ ಯೋಸೇಫನು ಐಗುಪ್ತದೇಶ ವನ್ನೆಲ್ಲಾ ಫರೋಹನಿಗಾಗಿ ಕೊಂಡುಕೊಂಡನು. ಹೇಗಂದರೆ, ಬರವು ಅವರಿಗೆ ಕಠಿಣವಾಗಿದ್ದರಿಂದ ಐಗುಪ್ತ್ಯರು ತಮ್ಮತಮ್ಮ ಹೊಲಗಳನ್ನು ಮಾರಿಬಿಟ್ಟರು
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಸೇಫನು ಐಗುಪ್ತದೇಶದ ಎಲ್ಲಾ ಸಾಗುವಳಿಯ ಭೂವಿುಯನ್ನು ಫರೋಹನಿಗೋಸ್ಕರ ಕೊಂಡುಕೊಂಡನು. ಬರವು ಐಗುಪ್ತ್ಯರಿಗೆ ಘೋರವಾಗಿದ್ದದರಿಂದ ಅವರೆಲ್ಲರೂ ತಮ್ಮ ತಮ್ಮ ಹೊಲಗದ್ದೆಗಳನ್ನು ಮಾರಿಬಿಟ್ಟರು. ಹೀಗೆ ಸಾಗುವಳಿಯ ಭೂವಿುಯೆಲ್ಲಾ ಫರೋಹನದಾಯಿತು.
Kannada Bible (KNCL) BSI 2016
ಜೋಸೆಫ್ ಈಜಿಪ್ಟ್ ದೇಶದ ಎಲ್ಲ ಸಾಗುವಳಿ ಭೂಮಿಯನ್ನು ಫರೋಹನಿಗಾಗಿ ಕೊಂಡುಕೊಂಡನು. ಬರದ ಘೋರತೆಯಿಂದಾಗಿ ಈಜಿಪ್ಟಿನವರು ತಮ್ಮ ತಮ್ಮ ಹೊಲಗದ್ದೆಗಳನ್ನು ಮಾರಿಬಿಟ್ಟರು. ಹೀಗೆ ಸಾಗುವಳಿ ಭೂಮಿಯೆಲ್ಲ ಫರೋಹನದಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೋಸೇಫನು ಈಜಿಪ್ಟ್ ದೇಶವನ್ನೆಲ್ಲಾ ಫರೋಹನಿಗಾಗಿ ಕೊಂಡುಕೊಂಡನು. ಬರವು ಅವರಿಗೆ ಘೋರವಾಗಿದ್ದುದರಿಂದ ಈಜಿಪ್ಟನವರು ತಮ್ಮ ತಮ್ಮ ಹೊಲಗಳನ್ನು ಮಾರಿಬಿಟ್ಟರು. ಹೀಗೆ ದೇಶವು ಫರೋಹನದಾಯಿತು.