Genesis 47:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪುರೋಹಿತರು ಹೊಂದಿದ್ದ ಭೂಮಿಯನ್ನು ಮಾತ್ರ ಯೋಸೇಫನು ಕೊಂಡುಕೊಳ್ಳಲಿಲ್ಲ. ಭೂಮಿಯನ್ನು ಮಾರುವ ಅವಶ್ಯಕತೆ ಪುರೋಹಿತರಿಗೆ ಇರಲಿಲ್ಲ. ಯಾಕೆಂದರೆ ಫರೋಹನೇ ಅವರಿಗೆ ಸಂಬಳವನ್ನು ಕೊಡುತ್ತಿದ್ದನು. ಆದ್ದರಿಂದ ಅವರು ಆ ಹಣದಿಂದ ಆಹಾರವನ್ನು ಕೊಂಡುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪುರೋಹಿತರ ಭೂಮಿಯನ್ನು ಮಾತ್ರ ಅವನು ಕೊಂಡುಕೊಳ್ಳಲಿಲ್ಲ. ಪುರೋಹಿತರು ಫರೋಹನ ಕಡೆಯಿಂದ ಭತ್ಯೆ ಸಿಕ್ಕಿದ್ದರಿಂದ ಅವರು ಫರೋಹನು ಕೊಟ್ಟ ಭತ್ಯೆದಿಂದಲೇ ಜೀವನ ಮಾಡುತ್ತಿದ್ದರು; ಆದುದರಿಂದ ತಮ್ಮ ಭೂಮಿಯನ್ನು ಮಾರಲಿಲ್ಲ.
Kannada BSI Bible 2016
ವೈದಿಕರ ಭೂಮಿಯನ್ನು ಮಾತ್ರ ಅವನು ಕೊಂಡು ಕೊಳ್ಳಲಿಲ್ಲ. ಯಾಕಂದರೆ ಫರೋಹನು ವೈದಿಕರಿಗೆ ಭಾಗಗಳನ್ನು ನೇಮಿಸಿದ್ದನು. ಅವನು ಅವರಿಗೆ ನೇಮಿಸಿದ್ದನ್ನು ಅವರು ಊಟಮಾಡುತ್ತಿದ್ದರು; ಆದ ದರಿಂದ ಅವರು ತಮ್ಮ ಭೂಮಿಗಳನ್ನು ಮಾರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ವೈದಿಕರ ಭೂವಿುಯನ್ನು ಮಾತ್ರ ಅವನು ಕೊಂಡುಕೊಳ್ಳಲಿಲ್ಲ. ವೈದಿಕರಿಗೆ ಫರೋಹನ ಕಡೆಯಿಂದ ಆಯವು ಸಿಕ್ಕಿದ್ದರಿಂದ ಅವರು ಫರೋಹನು ಕೊಟ್ಟ ಆಯದಿಂದ ಜೀವನ ಮಾಡುತ್ತಿದ್ದರು; ಆದದರಿಂದ ತಮ್ಮ ಭೂವಿುಯನ್ನು ಮಾರಲಿಲ್ಲ.
Kannada Bible (KNCL) BSI 2016
ಅರ್ಚಕರ ಭೂಮಿಯನ್ನು ಮಾತ್ರ ಅವನು ಕೊಂಡುಕೊಳ್ಳಲಿಲ್ಲ. ಏಕೆಂದರೆ ಅವರಿಗೆ ಫರೋಹನಿಂದ ಭತ್ಯ ದೊರಕುತ್ತಿತ್ತು. ಆ ಭತ್ಯದಿಂದ ಜೀವನ ನಡೆಸುತ್ತಿದ್ದ ಆ ಅರ್ಚಕರು ತಮ್ಮ ಭೂಮಿಯನ್ನು ಮಾರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕರ ಭೂಮಿಯನ್ನು ಮಾತ್ರ ಅವನು ಕೊಂಡುಕೊಳ್ಳಲಿಲ್ಲ. ಏಕೆಂದರೆ ಫರೋಹನು ಯಾಜಕರಿಗೆ ಭತ್ಯೆಗಳನ್ನು ನೇಮಿಸಿದ್ದನು. ಅವನು ಅವರಿಗೆ ನೇಮಿಸಿದ್ದನ್ನು, ಅವರು ಊಟಮಾಡುತ್ತಿದ್ದರು. ಆದ್ದರಿಂದ ಅವರು ತಮ್ಮ ಭೂಮಿಗಳನ್ನು ಮಾರಲಿಲ್ಲ.

Recommended Reading