Genesis 47:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಜನರು, “ನೀನು ನಮ್ಮ ಜೀವವನ್ನು ಉಳಿಸಿರುವೆ. ನಾವು ಸಂತೋಷದಿಂದ ಫರೋಹನ ಗುಲಾಮರಾಗುತ್ತೇವೆ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಅವರು, “ನಮ್ಮ ಪ್ರಾಣಗಳನ್ನು ಉಳಿಸಿದ್ದೀ; ನಮ್ಮ ಸ್ವಾಮಿಯ ದಯೆ ನಿಮ್ಮ ಮೇಲಿರಲಿ; ನಾವು ಫರೋಹನಿಗೆ ಗುಲಾಮರಾಗಿದ್ದೇವೆ” ಎಂದರು.
Kannada BSI Bible 2016
ಆಗ ಅವರು--ನೀನೇ ನಮ್ಮನ್ನು ಬದುಕಿಸಿದ್ದೀ, ನಮ್ಮ ಒಡೆಯನ ಕಣ್ಣುಗಳ ಮುಂದೆ ನಮಗೆ ಕೃಪೆ ದೊರಕಲಿ. ನಾವು ಫರೋಹನ ದಾಸರಾಗಿರುವೆವು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಅವರು - ನಮ್ಮ ಪ್ರಾಣಗಳನ್ನು ಉಳಿಸಿದ್ದೀ; ನಮ್ಮ ಸ್ವಾವಿುಯ ದಯೆ ನಮ್ಮ ಮೇಲಿರಲಿ; ನಾವು ಫರೋಹನಿಗೆ ಗುಲಾಮರಾಗಿದ್ದೇವೆ ಅಂದರು.
Kannada Bible (KNCL) BSI 2016
ಅದಕ್ಕೆ ಅವರು, ನಮ್ಮ ಪ್ರಾಣಗಳನ್ನು ಉಳಿಸಿದ್ದೀರಿ. ನಮ್ಮ ದಣಿಗಳಾದ ನಿಮ್ಮ ದಯೆ ನಮ್ಮ ಮೇಲಿರಲಿ; ನಾವು ಫರೋಹನಿಗೆ ಊಳಿಗದವರಾಗಿರುತ್ತೇವೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು, “ನೀನೇ ನಮ್ಮನ್ನು ಬದುಕಿಸಿದ್ದೀ, ನಮ್ಮ ಒಡೆಯನ ಕಣ್ಣುಗಳ ಮುಂದೆ ನಮಗೆ ದಯೆ ದೊರಕಲಿ. ನಾವು ಫರೋಹನ ದಾಸರಾಗಿರುವೆವು,” ಎಂದರು.