Genesis 47:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಯೋಸೇಫನು ಒಂದು ಕಾನೂನನ್ನು ಮಾಡಿದನು. ಅದು ಇಂದಿಗೂ ಜಾರಿಯಲ್ಲಿದೆ. ಆ ಕಾನೂನಿನ ಪ್ರಕಾರ, ಭೂಮಿಯ ಫಸಲಿನಲ್ಲಿ ಐದನೇ ಒಂದು ಭಾಗವು ಫರೋಹನಿಗೆ ಸೇರಿದ್ದಾಗಿದೆ. ಫರೋಹನು ಎಲ್ಲಾ ಜಮೀನಿಗೂ ಒಡೆಯನಾಗಿದ್ದಾನೆ. ಪುರೋಹಿತರ ಭೂಮಿಯು ಮಾತ್ರ ಅವನಿಗೆ ಸೇರಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆಳೆಯಲ್ಲಿ ಐದನೆಯ ಒಂದು ಪಾಲು ಫರೋಹನಿಗೆ ಸಲ್ಲಬೇಕೆಂಬುದನ್ನು ಯೋಸೇಫನು ಐಗುಪ್ತ ದೇಶದಲ್ಲಿ ಕಟ್ಟಳೆಯಾಗಿ ಮಾಡಿದನು. ಈ ದಿನದ ವರೆಗೂ ಅದು ಹಾಗೆಯೇ ಇದೆ. ಪುರೋಹಿತರ ಭೂಮಿ ಮಾತ್ರ ಫರೋಹನಿಗೆ ಸ್ವಾಧೀನವಾಗಲಿಲ್ಲ.
Kannada BSI Bible 2016
ಹೀಗೆ ಯೋಸೇಫನು ಫರೋಹನಿಗೆ ಐದನೆಯ ಪಾಲು ಆಗಬೇಕೆಂಬದನ್ನು ಐಗುಪ್ತದ ಭೂಮಿಗೆ ಇಂದಿನ ವರೆಗೂ ನೇಮಕಮಾಡಿ ಸ್ಥಾಪಿಸಿ ದನು. ವೈದಿಕರ ಭೂಮಿಯು ಮಾತ್ರ ಫರೋಹ ನದಾಗಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆಳೆಯಲ್ಲಿ ಐದನೆಯ ಒಂದು ಪಾಲು ಫರೋಹನಿಗೆ ಸಲ್ಲಬೇಕೆಂಬದನ್ನು ಯೋಸೇಫನು ಐಗುಪ್ತದೇಶದಲ್ಲಿ ಕಟ್ಟಳೆಯಾಗಿ ನೇವಿುಸಿದನು. ಈ ದಿನದವರೆಗೂ ಹಾಗೆಯೇ ಇದೆ. ವೈದಿಕರ ಭೂವಿುಯು ಮಾತ್ರ ಫರೋಹನಿಗೆ ಸ್ವಾಧೀನವಾಗಲಿಲ್ಲ.
Kannada Bible (KNCL) BSI 2016
ಬೆಳೆಯಲ್ಲಿ ಐದನೆಯ ಒಂದು ಪಾಲು ಫರೋಹನಿಗೆ ಸಲ್ಲತಕ್ಕದ್ದು ಎಂಬ ಯೋಜನೆಯನ್ನು ಜೋಸೆಫನು ಈಜಿಪ್ಟ್ ದೇಶದ ಒಂದು ಶಾಸನವನ್ನಾಗಿ ಮಾಡಿದನು. ಈ ದಿನದವರೆಗೂ ಆ ಶಾಸನ ರೂಢಿಯಲ್ಲಿದೆ. ಅರ್ಚಕರ ಭೂಮಿ ಮಾತ್ರ ಫರೋಹನಿಗೆ ಸ್ವಾಧೀನವಾಗಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಯೋಸೇಫನು ಫರೋಹನಿಗೆ ಐದನೆಯ ಪಾಲು ಆಗಬೇಕೆಂಬುದನ್ನು ಈಜಿಪ್ಟಿನ ಭೂಮಿಗೆ ಇಂದಿನವರೆಗೂ ನಿಯಮವಾಗಿ ಸ್ಥಾಪಿಸಿದನು. ಯಾಜಕರ ಭೂಮಿಯು ಮಾತ್ರ ಫರೋಹನದಾಗಲಿಲ್ಲ.