Genesis 47:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರ ವಾಸಕ್ಕಾಗಿ ಈಜಿಪ್ಟಿನಲ್ಲಿ ಯಾವ ಸ್ಥಳವನ್ನಾದರೂ ಆರಿಸಿಕೊಳ್ಳಬಹುದು. ನಿನ್ನ ತಂದೆಯೂ ನಿನ್ನ ಸಹೋದರರೂ ವಾಸವಾಗಿರಲು ಉತ್ತಮವಾದ ಪ್ರದೇಶವನ್ನು ಕೊಡು. ಅವರು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲಿ. ಅವರು ನಿಪುಣರಾದ ಕುರುಬರಾಗಿದ್ದರೆ, ಅವರು ನನ್ನ ದನಕರುಗಳನ್ನು ಸಹ ನೋಡಿಕೊಳ್ಳಬಹುದು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐಗುಪ್ತ ದೇಶವು ನಿನ್ನ ಮುಂದೆ ಇದೆ, ಅದರೊಳಗೆ ಉತ್ತಮ ಭಾಗದಲ್ಲಿ ನಿನ್ನ ತಂದೆ, ನಿನ್ನ ಅಣ್ಣತಮ್ಮಂದಿರು ವಾಸಮಾಡುವಂತೆ ಮಾಡು. ಅವರು ಗೋಷೆನ್ ಸೀಮೆಯಲ್ಲಿ ವಾಸಮಾಡಲಿ; ಅವರಲ್ಲಿ ಯಾರಾದರೂ ಸಮರ್ಥರೆಂದು ತಿಳಿದರೆ ಅವರನ್ನು ನನ್ನ ಕುರಿದನ ಮಂದೆಗಳ ಮೇಲ್ವಿಚಾರಣೆಗಾಗಿ ನೇಮಿಸು” ಎಂದು ಹೇಳಿದನು.
Kannada BSI Bible 2016
ಐಗುಪ್ತದೇಶವು ನಿನ್ನ ಮುಂದೆ ಇದೆ. ದೇಶದ ಉತ್ತಮವಾದದ್ದರಲ್ಲಿ ನಿನ್ನ ತಂದೆಯೂ ಸಹೋದರರೂ ವಾಸಮಾಡುವಂತೆ ಮಾಡು. ಗೋಷೆನ್‌ ಸೀಮೆಯಲ್ಲಿ ಅವರು ವಾಸವಾ ಗಿರಲಿ. ಅವರಲ್ಲಿ ಚಟುವಟಿಕೆಯುಳ್ಳವರು ಇದ್ದಾರೆಂದು ನಿನಗೆ ತಿಳಿದರೆ ಅವರನ್ನು ನಮಗಿರುವ ಮಂದೆಗಳ ಮೇಲೆ ವಿಚಾರಕರನ್ನಾಗಿ ಇರಿಸು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರೊಳಗಣ ಉತ್ತಮಭಾಗದಲ್ಲಿ ನಿನ್ನ ತಂದೆಗೂ ನಿನ್ನ ಅಣ್ಣತಮ್ಮಂದಿರಿಗೂ ವಾಸಸ್ಥಾನವನ್ನು ನೇವಿುಸಬಹುದು. ಅವರು ಗೋಷೆನ್ ಸೀಮೆಯಲ್ಲಿ ವಾಸಮಾಡಲಿ; ಅವರಲ್ಲಿ ಯಾರಾದರೂ ಯೋಗ್ಯರಾಗಿ ತೋರಿದರೆ ಅವರನ್ನು ನನ್ನ ದನಗಳ ಮೇಲ್ವಿಚಾರಣೆಗೆ ನೇವಿುಸು ಎಂದು ಹೇಳಿದನು.
Kannada Bible (KNCL) BSI 2016
ಈಜಿಪ್ಟ್ ದೇಶವು ನಿನ್ನ ಮುಂದಿದೆ; ಅದರಲ್ಲಿನ ಉತ್ತಮ ಭಾಗವನ್ನು ನಿನ್ನ ತಂದೆಗೂ ಸಹೋದರರಿಗೂ ವಾಸಸ್ಥಾನವಾಗಿ ನೇಮಿಸು; ಗೋಷೆನ್ ಪ್ರಾಂತ್ಯದಲ್ಲಿ ಬೇಕಾದರೆ ವಾಸಮಾಡಲಿ; ಅವರಲ್ಲಿ ನುರಿತವರು ಯಾರಾದರು ಇದ್ದರೆ ಅವರನ್ನು ನನ್ನ ದನಕರುಗಳ ಮೇಲ್ವಿಚಾರಣೆಗೆ ನೇಮಿಸು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಜಿಪ್ಟ್ ದೇಶವು ನಿನ್ನ ಮುಂದೆ ಇದೆ. ದೇಶದ ಉತ್ತಮವಾದ ಕಡೆ ನಿನ್ನ ತಂದೆಯೂ, ಸಹೋದರರೂ ವಾಸಮಾಡುವಂತೆ ಮಾಡು. ಗೋಷೆನ್ ಪ್ರಾಂತದಲ್ಲಿ ಅವರು ವಾಸವಾಗಿರಲಿ. ಅವರಲ್ಲಿ ಯಾರಾದರೂ ಸಮರ್ಥರೆಂದು ನೀನು ತಿಳಿದರೆ, ಅವರನ್ನು ನಮಗಿರುವ ಪಶುಗಳ ಮೇಲೆ ವಿಚಾರಕರನ್ನಾಗಿ ಇರಿಸು,” ಎಂದನು.