Genesis 47:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಕೋಬನು ಫರೋಹನಿಗೆ, “ನಾನು ನನ್ನ ಅಲ್ಪಕಾಲದ ಜೀವನದಲ್ಲಿ ಅನೇಕ ತೊಂದರೆಗಳನ್ನು ಅನುಭವಿಸಿದೆನು. ಈಗ ನನಗೆ ನೂರಮೂವತ್ತು ವರ್ಷ. ನನ್ನ ತಂದೆಯೂ ಅವನ ಪೂರ್ವಿಕರೂ ನನಗಿಂತ ಹೆಚ್ಚು ವರ್ಷ ಜೀವಿಸಿದರು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೋಬನು ಫರೋಹನಿಗೆ, “ನನ್ನ ಇಹಲೋಕ ಪ್ರಯಾಣದ ಕಾಲವು ನೂರಮೂವತ್ತು ವರ್ಷಗಳು. ನಾನು ಜೀವಿಸಿರುವ ಕಾಲವು ಸ್ವಲ್ಪವಾಗಿಯೂ ಹಾಗೂ ದುಃಖಕರವಾಗಿಯೂ ಇತ್ತು; ಆದರೂ ನನ್ನ ಪೂರ್ವಿಕರು ಜೀವಿಸಿದಷ್ಟು ವರ್ಷಗಳು ನನಗಾಗಿಲ್ಲ” ಎಂದು ಹೇಳಿದನು.
Kannada BSI Bible 2016
ಯಾಕೋಬನು ಫರೋಹನಿಗೆ--ನನ್ನ ಪ್ರವಾಸದ ದಿನಗಳು ನೂರ ಮೂವತ್ತು ವರುಷಗಳು. ನನ್ನ ಜೀವನದ ದಿನಗಳು ಸ್ವಲ್ಪವಾಗಿಯೂ ದುಃಖಕರವಾಗಿಯೂ ಇದ್ದವು. ನನ್ನ ತಂದೆಗಳು ತಾವು ಪ್ರವಾಸಿಗಳಾಗಿದ್ದ ಜೀವನದ ವರುಷಗಳ ದಿನಗಳಿಗೆ ನಾನು ಮುಟ್ಟಲಿಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕೋಬನು - ನಾನು ಲೋಕದಲ್ಲಿ ಸಂಚಾರಮಾಡಿದ್ದು ನೂರಮೂವತ್ತು ವರುಷಗಳೇ; ನಾನು ಜೀವಿಸಿರುವ ಕಾಲವು ಸ್ವಲ್ಪವಾಗಿಯೂ ದುಃಖಕರವಾಗಿಯೂ ಇತ್ತು; ನನ್ನ ಪಿತೃಗಳು ಲೋಕಯಾತ್ರೆ ಮಾಡಿದಷ್ಟು ವರುಷಗಳು ನನಗಾಗಿಲ್ಲ ಎಂದು ಹೇಳಿ
Kannada Bible (KNCL) BSI 2016
ಯಕೋಬನು, “ನನ್ನ ಬಾಳಿನ ಪಯಣದ ದಿನಗಳು ನೂರ ಮೂವತ್ತು ವರ್ಷಗಳಷ್ಟೇ. ಎಣಿಕೆಯಲ್ಲಿ ಅವು ಕಮ್ಮಿ; ಕಷ್ಟದುಃಖದಲ್ಲಿ ಜಾಸ್ತಿ; ನನ್ನ ಪೂರ್ವಜರು ಬಾಳಿದಷ್ಟು ವರ್ಷಗಳು ನನಗಾಗಿಲ್ಲ,” ಎಂದು ಹೇಳಿ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಕೋಬನು ಫರೋಹನಿಗೆ, “ನಾನು ಲೋಕದಲ್ಲಿ ಸಂಚಾರಮಾಡಿದ್ದು ನೂರಮೂವತ್ತು ವರುಷಗಳೇ. ನನ್ನ ವರ್ಷಗಳು ಕಡಿಮೆಯಾದರೂ ಕಠಿಣವಾದವುಗಳು ಆಗಿವೆ. ಅವು ನನ್ನ ಪಿತೃಗಳ ಪ್ರಯಾಣದ ವರ್ಷಗಳಿಗೆ ಸಮವಾಗಿಲ್ಲ,” ಎಂದನು.