Genesis 48:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲನಿಗೆ ತುಂಬ ವಯಸ್ಸಾಗಿತ್ತು. ಅವನಿಗೆ ಕಣ್ಣು ಸರಿಯಾಗಿ ಕಾಣುತ್ತಿರಲಿಲ್ಲ. ಆದ್ದರಿಂದ ಯೋಸೇಫನು ಅವರನ್ನು ತಂದೆಯ ಬಳಿಗೆ ಕರೆದುಕೊಂಡು ಬಂದನು. ಇಸ್ರೇಲನು ಆ ಹುಡುಗರನ್ನು ಅಪ್ಪಿಕೊಂಡು ಮುದ್ದಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲನು ವೃದ್ಧಾಪ್ಯದಿಂದ ಮೊಬ್ಬು ಕಣ್ಣುಳ್ಳವನಾಗಿ ನೋಡಲಾರದೆ ಇದ್ದನು. ಯೋಸೇಫನು ಅವರನ್ನು ಅವನ ಬಳಿಗೆ ಕರೆದುಕೊಂಡು ಬರಲು ಅವನು ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು.
Kannada BSI Bible 2016
ಆದರೆ ಇಸ್ರಾಯೇಲನು ಮುದುಕನಾಗಿದ್ದದರಿಂದ ಅವನ ಕಣ್ಣುಗಳು ಕಾಣದಷ್ಟು ಮೊಬ್ಬಾಗಿದ್ದವು. ಆಗ ಅವನು ಅವರನ್ನು ಯಾಕೋಬನ ಸವಿಾಪಕ್ಕೆ ತಂದಾಗ ಅವನು ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲನು ವೃದ್ಧಾಪ್ಯದಿಂದ ಮೊಬ್ಬುಕಣ್ಣುಳ್ಳವನಾಗಿ ನೋಡಲಾರದೆ ಇದ್ದನು. ಯೋಸೇಫನು ಅವರನ್ನು ಅವನ ಬಳಿಗೆ ಕರಕೊಂಡು ಬರಲು ಅವನು ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು.
Kannada Bible (KNCL) BSI 2016
ವೃದ್ಧಾಪ್ಯದ ನಿಮಿತ್ತ ಯಕೋಬನ ಕಣ್ಣು ಮೊಬ್ಬಾಗಿತ್ತು. ಜೋಸೆಫನು ಆ ಮಕ್ಕಳನ್ನು ಹತ್ತಿರಕ್ಕೆ ತಂದಾಗ ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲನು ಮುದುಕನಾಗಿದ್ದದ್ದರಿಂದ, ಅವನ ಕಣ್ಣುಗಳು ಕಾಣದಷ್ಟು ಮಬ್ಬಾಗಿದ್ದವು. ಯೋಸೇಫನು ಅವರನ್ನು ಅವನ ಸಮೀಪಕ್ಕೆ ತಂದಾಗ, ಅವನು ಅವರನ್ನು ಮುದ್ದಿಟ್ಟು, ಅಪ್ಪಿಕೊಂಡನು.