Genesis 48:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಇಸ್ರೇಲನು ಯೋಸೇಫನಿಗೆ, “ನಾನು ಮತ್ತೆ ನಿನ್ನ ಮುಖವನ್ನು ನೋಡುತ್ತೇನೆ ಎಂದು ಯೋಚಿಸಿರಲಿಲ್ಲ. ಆದರೆ ನಾನು ನಿನ್ನನ್ನೂ ನಿನ್ನ ಮಕ್ಕಳನ್ನೂ ನೋಡುವಂತೆ ದೇವರು ಅನುಗ್ರಹಿಸಿದ್ದಾನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಮುಖವನ್ನು ತಿರುಗಿ ನೋಡುವೆನೆಂದು ನಾನು ನೆನಸಿರಲಿಲ್ಲ. ಆದರೆ ನಾನು ನಿನ್ನನ್ನು ಮಾತ್ರವಲ್ಲದೆ ನಿನ್ನ ಸಂತಾನವನ್ನೂ ನೋಡುವಂತೆ ದೇವರು ಅನುಗ್ರಹಿಸಿದ್ದಾನೆ” ಎಂದನು.
Kannada BSI Bible 2016
ಇಸ್ರಾಯೇಲನು ಯೋಸೇಫನಿಗೆ--ನಿನ್ನ ಮುಖ ವನ್ನು ನೋಡುವೆನೆಂದು ನಾನು ನೆನಸಲಿಲ್ಲ. ಆದರೆ ಇಗೋ, ನಿನ್ನ ಸಂತಾನವನ್ನು ಸಹ ದೇವರು ನನಗೆ ನೋಡಮಾಡಿದ್ದಾನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಇಸ್ರಾಯೇಲನು ಯೋಸೇಫನಿಗೆ - ನಿನ್ನ ಮುಖವನ್ನು ತಿರಿಗಿ ನೋಡುವೆನೆಂದು ನಾನು ನೆನಸಿರಲಿಲ್ಲ; ಆದರೆ ನಾನು ನಿನ್ನನ್ನು ಮಾತ್ರವಲ್ಲದೆ ನಿನ್ನ ಸಂತಾನವನ್ನೂ ನೋಡುವಂತೆ ದೇವರು ಅನುಗ್ರಹಿಸಿದ್ದಾನಲ್ಲಾ ಅಂದನು.
Kannada Bible (KNCL) BSI 2016
ಅನಂತರ ಜೋಸೆಫನಿಗೆ, “ನಿನ್ನ ಮುಖವನ್ನು ಮತ್ತೆ ನೋಡುವೆನೆಂದು ನಾನು ನೆನಸಿರಲಿಲ್ಲ. ಈಗ ನಿನ್ನನ್ನು ಮಾತ್ರವಲ್ಲ, ನಿನ್ನ ಮಕ್ಕಳನ್ನೂ ನೋಡುವಂತೆ ದೇವರು ಅನುಗ್ರಹಿಸಿದ್ದಾರೆ!” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಮುಖವನ್ನು ಕಾಣುವೆನೆಂದು ನಾನು ನೆನಸಿರಲಿಲ್ಲ. ಆದರೆ ನಿನ್ನ ಸಂತಾನವನ್ನು ಸಹ ದೇವರು ನನಗೆ ಕಾಣುವಂತೆ ಅನುಗ್ರಹಿಸಿದ್ದಾನೆ,” ಎಂದನು.