Genesis 48:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋಸೇಫನು ಎಫ್ರಾಯೀಮನನ್ನು ತನ್ನ ಬಲಭಾಗದಲ್ಲಿಯೂ ಮನಸ್ಸೆಯನ್ನು ತನ್ನ ಎಡಭಾಗದಲ್ಲಿಯೂ ಕುಳ್ಳಿರಿಸಿದನು. (ಆದ್ದರಿಂದ ಎಫ್ರಾಯೀಮನು ಇಸ್ರೇಲನ ಎಡಭಾಗದಲ್ಲಿಯೂ ಮನಸ್ಸೆಯು ಬಲಭಾಗದಲ್ಲಿಯೂ ಇದ್ದರು.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಯೋಸೇಫನು ತನ್ನ ಬಲಗಡೆಯಲ್ಲಿ ಇಸ್ರಾಯೇಲನ ಎಡಗೈಗೆ ಎದುರಾಗಿ ಎಫ್ರಾಯೀಮನನ್ನೂ, ತನ್ನ ಎಡಗಡೆಯಲ್ಲಿ ಇಸ್ರಾಯೇಲನ ಬಲಗೈಗೆ ಎದುರಾಗಿ ಮನಸ್ಸೆಯನ್ನೂ ನಿಲ್ಲಿಸಿ, ಅವರಿಬ್ಬರನ್ನೂ ತನ್ನ ತಂದೆಯ ಬಳಿ ನಿಲ್ಲಿಸಿದನು.
Kannada BSI Bible 2016
ತರುವಾಯ ಯೋಸೇಫನು ತನ್ನ ಬಲಗಡೆಯಲ್ಲಿ ಇಸ್ರಾಯೇಲನ ಎಡಗೈಗೆ ಎದುರಾಗಿ ಎಫ್ರಾಯಾಮನನ್ನೂ ತನ್ನ ಎಡಗಡೆಯಲ್ಲಿ ಇಸ್ರಾಯೇಲನ ಬಲಗೈಗೆ ಎದುರಾಗಿ ಮನಸ್ಸೆಯನ್ನೂ ನಿಲ್ಲಿಸಿ ಅವರಿಬ್ಬರನ್ನು ತನ್ನ ತಂದೆಯ ಬಳಿಗೆ ತಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಯೋಸೇಫನು ತನ್ನ ಬಲಗಡೆಯಲ್ಲಿ ಇಸ್ರಾಯೇಲನ ಎಡಗೈಗೆ ಎದುರಾಗಿ ಎಫ್ರಾಯೀಮನನ್ನೂ ತನ್ನ ಎಡಗಡೆಯಲ್ಲಿ ಇಸ್ರಾಯೇಲನ ಬಲಗೈಗೆ ಎದುರಾಗಿ ಮನಸ್ಸೆಯನ್ನೂ ನಿಲ್ಲಿಸಿ ಅವರಿಬ್ಬರನ್ನೂ ತಂದೆಯ ಬಳಿಗೆ ಬರಮಾಡಿದನು.
Kannada Bible (KNCL) BSI 2016
ತರುವಾಯ ಜೋಸೆಫನು ಎಫ್ರಯಿಮನನ್ನು ತನ್ನ ಬಲಕ್ಕೆ ಯಕೋಬನ ಎಡಗೈಗೆದುರಾಗಿ ಮತ್ತು ಮನಸ್ಸೆಯನ್ನು ತನ್ನ ಎಡಕ್ಕೆ, ಯಕೋಬನ ಬಲಗೈಗೆದುರಾಗಿ, ತಂದೆಯ ಮುಂದೆ ನಿಲ್ಲಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಯೋಸೇಫನು ತನ್ನ ಬಲಗಡೆಯಲ್ಲಿ ಇಸ್ರಾಯೇಲನ ಎಡಗೈಗೆ ಎದುರಾಗಿ ಎಫ್ರಾಯೀಮನನ್ನೂ, ತನ್ನ ಎಡಗಡೆಯಲ್ಲಿ ಇಸ್ರಾಯೇಲನ ಬಲಗೈಗೆ ಎದುರಾಗಿ ಮನಸ್ಸೆಯನ್ನೂ ನಿಲ್ಲಿಸಿ, ಅವರಿಬ್ಬರನ್ನೂ ತನ್ನ ತಂದೆಯ ಬಳಿಗೆ ತಂದನು.