Genesis 48:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಇಸ್ರೇಲನು ತನ್ನ ಕೈಗಳನ್ನು ವಾರೆ ಮಾಡಿ ತನ್ನ ಬಲಗೈಯನ್ನು ಚಿಕ್ಕ ಮಗನಾದ ಎಫ್ರಾಯೀಮನ ತಲೆಯ ಮೇಲಿಟ್ಟು ಎಡಗೈಯನ್ನು ದೊಡ್ಡ ಮಗನಾದ ಮನಸ್ಸೆಯ ತಲೆಯ ಮೇಲಿಟ್ಟನು. ಮನಸ್ಸೆಯು ಹಿರಿಯ ಮಗನಾಗಿದ್ದರೂ ಇಸ್ರೇಲನು ಮನಸ್ಸೆಯ ತಲೆಯ ಮೇಲೆ ಎಡಗೈಯನ್ನಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನಸ್ಸೆಯು ಚೊಚ್ಚಲ ಮಗನಾಗಿದ್ದರೂ, ಇಸ್ರಾಯೇಲನು ತನ್ನ ಕೈಗಳನ್ನು ಅಡ್ಡವಾಗಿ ಚಾಚಿ ಕಿರಿಯವನಾದ ಎಫ್ರಾಯೀಮನ ತಲೆಯ ಮೇಲೆ ಬಲಗೈಯನ್ನೂ, ಮನಸ್ಸೆಯ ತಲೆಯ ಮೇಲೆ ಎಡಗೈಯನ್ನೂ ಇಟ್ಟನು.
Kannada BSI Bible 2016
ಆಗ ಇಸ್ರಾಯೇಲನು ತನ್ನ ಬಲಗೈಯನ್ನು ಚಾಚಿ ಚಿಕ್ಕವನಾದ ಎಫ್ರಾಯಾಮನ ತಲೆಯ ಮೇಲೆಯೂ ತನ್ನ ಎಡಗೈಯನ್ನು ಮನಸ್ಸೆಯ ತಲೆಯ ಮೇಲೆಯೂ ಇಟ್ಟನು. ಮನಸ್ಸೆಯು ಹಿರಿಯವನಾಗಿದ್ದರೂ ಬೇಕೆಂದೇ ಅವನು ತನ್ನ ಕೈಗಳನ್ನು ಹಾಗೆ ಇಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮನಸ್ಸೆಯು ಚೊಚ್ಚಲುಮಗನಾಗಿದ್ದರೂ ಇಸ್ರಾಯೇಲನು ತನ್ನ ಕೈಗಳನ್ನು ಅಡ್ಡವಾಗಿ ಚಾಚಿ ಕಿರಿಯವನಾದ ಎಫ್ರಾಯೀಮನ ತಲೆಯ ಮೇಲೆ ಬಲಗೈಯನ್ನೂ ಮನಸ್ಸೆಯ ತಲೆಯ ಮೇಲೆ ಎಡಗೈಯನ್ನೂ ಇಟ್ಟು ಯೋಸೇಫನನ್ನು ಆಶೀರ್ವದಿಸಿ -
Kannada Bible (KNCL) BSI 2016
ಮನಸ್ಸೆಯು ಜೇಷ್ಠಮಗನಾಗಿದ್ದರೂ ಯಕೋಬನು ತನ್ನ ಕೈಗಳನ್ನು ಅಡ್ಡಡ್ಡವಾಗಿ ಚಾಚಿ ಕಿರಿಯವನಾದ ಎಫ್ರಯಿಮನ ತಲೆಯ ಮೇಲೆ ಬಲಗೈಯನ್ನು, ಮನಸ್ಸೆಯ ತಲೆಯ ಮೇಲೆ ಎಡಗೈಯನ್ನು ಇಟ್ಟು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಇಸ್ರಾಯೇಲನು ತನ್ನ ಬಲಗೈಯನ್ನು ಚಾಚಿ ಚಿಕ್ಕವನಾದ ಎಫ್ರಾಯೀಮನ ತಲೆಯ ಮೇಲೆಯೂ, ತನ್ನ ಎಡಗೈಯನ್ನು ಮನಸ್ಸೆಯ ತಲೆಯ ಮೇಲೆಯೂ ಇಟ್ಟನು. ಮನಸ್ಸೆಯು ಹಿರಿಯವನಾಗಿದ್ದರೂ, ಬೇಕೆಂದೇ ಅವನು ತನ್ನ ಕೈಗಳನ್ನು ಹಾಗೆ ಇಟ್ಟನು.