Genesis 48:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲನು ತನ್ನ ಬಲಗೈಯನ್ನು ಎಫ್ರಾಯೀಮನ ತಲೆಯ ಮೇಲಿಟ್ಟಿದ್ದರಿಂದ ಯೋಸೇಫನು ಅಸಮಾಧಾನದಿಂದ ನೋಡಿ ತಂದೆಯ ಕೈಯನ್ನು ಹಿಡಿದುಕೊಂಡನು; ಅಲ್ಲದೆ ತಂದೆಯ ಕೈಯನ್ನು ಎಫ್ರಾಯೀಮನ ತಲೆಯ ಮೇಲಿಂದ ತೆಗೆದುಕೊಂಡು ಮನಸ್ಸೆಯ ತಲೆಯ ಮೇಲೆ ಇಡಬೇಕೆಂದಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತನ್ನ ತಂದೆಯು ಬಲಗೈಯನ್ನು ಎಫ್ರಾಯೀಮನ ತಲೆಯ ಮೇಲೆ ಇಡುವುದನ್ನು ಯೋಸೇಫನು ಕಂಡು ಅಸಮಾಧಾನಪಟ್ಟು ಅವನ ಕೈಯನ್ನು ಎಫ್ರಾಯೀಮನ ತಲೆಯಿಂದ ಎತ್ತಿ ಮನಸ್ಸೆಯ ತಲೆಯ ಮೇಲೆ ಇಟ್ಟು,
Kannada BSI Bible 2016
ತನ್ನ ತಂದೆಯು ಎಫ್ರಾಯಾಮನ ತಲೆಯ ಮೇಲೆ ಬಲಗೈ ಇಟ್ಟದ್ದನ್ನು ಯೋಸೇಫನು ನೋಡಿದಾಗ ಅದು ಅವನ ದೃಷ್ಟಿಗೆ ಅಯುಕ್ತವಾಗಿತ್ತು. ಆದದರಿಂದ ಅವನು ತನ್ನ ತಂದೆಯ ಕೈಯನ್ನು ಹಿಡಿದು ಎಫ್ರಾಯಾಮನ ತಲೆಯ ಮೇಲಿಂದ ತೆಗೆದು ಮನಸ್ಸೆಯ ತಲೆಯ ಮೇಲೆ ಇಡುವದಕ್ಕಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತನ್ನ ತಂದೆಯು ಬಲಗೈಯನ್ನು ಎಫ್ರಾಯೀಮನ ತಲೆಯ ಮೇಲೆ ಇಡುವದನ್ನು ಯೋಸೇಫನು ಕಂಡು ಅಸಮಾಧಾನಪಟ್ಟು ಅವನ ಕೈಯನ್ನು ಎಫ್ರಾಯೀಮನ ತಲೆಯಿಂದ ಎತ್ತಿ ಮನಸ್ಸೆಯ ತಲೆಯ ಮೇಲೆ ಇಡುವದಕ್ಕಾಗಿ ಹಿಡಿದು ತಂದೆಗೆ -
Kannada Bible (KNCL) BSI 2016
ತನ್ನ ತಂದೆ ಬಲಗೈಯನ್ನು ಎಫ್ರಯಿಮನ ತಲೆಯ ಮೇಲೆ ಇಟ್ಟದ್ದು ಜೋಸೆಫನಿಗೆ ಹಿಡಿಸಲಿಲ್ಲ. ಅವನು ಆ ಕೈಯನ್ನು ಹಿಡಿದು ಎಫ್ರಯಿಮನ ತಲೆಯಿಂದ ಎತ್ತಿ ಮನಸ್ಸೆಯ ತಲೆಯ ಮೇಲೆ ಇಡುವಂತೆ ತಂದೆಗೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತನ್ನ ತಂದೆಯು ಎಫ್ರಾಯೀಮನ ತಲೆಯ ಮೇಲೆ ಬಲಗೈಯನ್ನು ಇಟ್ಟದ್ದನ್ನು ಯೋಸೇಫನು ಕಂಡಾಗ, ಅದು ಅವನಿಗೆ ಇಷ್ಟವಾಗಿರಲಿಲ್ಲ. ಆದ್ದರಿಂದ ಅವನು ತನ್ನ ತಂದೆಯ ಕೈಯನ್ನು ಹಿಡಿದು, ಎಫ್ರಾಯೀಮನ ತಲೆಯ ಮೇಲಿಂದ ತೆಗೆದು, ಮನಸ್ಸೆಯ ತಲೆಯ ಮೇಲೆ ಇಡುವುದರಲ್ಲಿದ್ದನು.