Genesis 48:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಸೇಫನು ಬಂದಾಗ ಯಾರೋ ಒಬ್ಬನು ಇಸ್ರೇಲನಿಗೆ, “ನಿನ್ನ ಮಗನಾದ ಯೋಸೇಫನು ನಿನ್ನನ್ನು ನೋಡಲು ಬಂದಿದ್ದಾನೆ” ಎಂದು ಹೇಳಿದನು. ಆಗ ಅವನು ಬಹಳ ಬಲಹೀನನಾಗಿದ್ದರೂ ಕಷ್ಟಪಟ್ಟು ಹಾಸಿಗೆಯ ಮೇಲೆ ಕುಳಿತುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಿನ್ನ ಮಗನಾದ ಯೋಸೇಫನು ನಿನ್ನ ಬಳಿಗೆ ಬಂದಿದ್ದಾನೆ” ಎಂದು ಯಾಕೋಬನಿಗೆ ತಿಳಿಸಲು, ಇಸ್ರಾಯೇಲನು ಚೇತರಿಸಿಕೊಂಡು ಹಾಸಿಗೆಯ ಮೇಲೆ ಎದ್ದು ಕುಳಿತುಕೊಂಡನು.
Kannada BSI Bible 2016
ಆಗ ಒಬ್ಬನು ಯಾಕೋಬನಿಗೆ--ಇಗೋ, ನಿನ್ನ ಮಗನಾದ ಯೋಸೇ ಫನು ನಿನ್ನ ಬಳಿಗೆ ಬರುತ್ತಾನೆ ಎಂದು ತಿಳಿಸಿದಾಗ ಇಸ್ರಾಯೇಲನು ಚೇತರಿಸಿಕೊಂಡು ಹಾಸಿಗೆಯ ಮೇಲೆ ಕೂತುಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಮಗನಾದ ಯೋಸೇಫನು ಬಂದನೆಂದು ಯಾಕೋಬನಿಗೆ ಒಬ್ಬನು ತಿಳಿಸಲು ಅವನು ಚೇತರಿಸಿಕೊಂಡು ಮಂಚದ ಮೇಲೆ ಕೂತುಕೊಂಡನು.
Kannada Bible (KNCL) BSI 2016
“ನಿಮ್ಮ ಮಗ ಜೋಸೆಫನು ಬಂದಿದ್ದಾನೆ,” ಎಂದು ಯಕೋಬನಿಗೆ ತಿಳಿಸಿದಾಗ ಅವನು ಚೇತರಿಸಿಕೊಂಡು ಹಾಸಿಗೆಯ ಮೇಲೆ ಕುಳಿತುಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಕೋಬನಿಗೆ, “ನಿನ್ನ ಮಗ ಯೋಸೇಫನು ಬಂದಿದ್ದಾನೆ,” ಎಂದು ತಿಳಿಸಿದಾಗ, ಇಸ್ರಾಯೇಲನು ಚೇತರಿಸಿಕೊಂಡು ಹಾಸಿಗೆಯ ಮೇಲೆ ಕುಳಿತುಕೊಂಡನು.