Genesis 48:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಇಸ್ರೇಲನು ಯೋಸೇಫನಿಗೆ, “ನೋಡು, ನಾನು ಸಾಯುವ ಕಾಲ ಸಮೀಪಿಸಿದೆ. ಆದರೆ ದೇವರು ಇನ್ನೂ ನಿನ್ನ ಸಂಗಡವಿರುವನು. ಅವನು ನಿನ್ನನ್ನು ನಿನ್ನ ಪೂರ್ವಿಕರ ದೇಶಕ್ಕೆ ಹಿಂತಿರುಗಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲನು ಯೋಸೇಫನಿಗೆ, “ನನಗೆ ಮರಣವು ಸಮೀಪಿಸಿದೆ, ಆದರೆ ದೇವರು ನಿಮ್ಮೊಂದಿಗಿದ್ದು, ನಿಮ್ಮನ್ನು ಪೂರ್ವಿಕರ ದೇಶಕ್ಕೆ ಪುನಃ ಬರಮಾಡುವನು.
Kannada BSI Bible 2016
ಆಗ ಇಸ್ರಾಯೇಲನು ಯೋಸೇಫನಿಗೆ--ಇಗೋ, ನಾನು ಸಾಯುತ್ತೇನೆ; ಆದರೆ ದೇವರು ನಿಮ್ಮ ಸಂಗಡವಿದ್ದು ನಿಮ್ಮನ್ನು ನಿಮ್ಮ ತಂದೆಗಳ ದೇಶಕ್ಕೆ ಮತ್ತೆ ಸೇರಿಸುವನು.ಇದಲ್ಲದೆ ನಾನು ನನ್ನ ಕತ್ತಿ ಬಿಲ್ಲುಗಳಿಂದ ಅಮೋರಿಯರ ವಶದಿಂದ ತಕ್ಕೊಂಡ ಒಂದು ಪಾಲನ್ನು ನಿನ್ನ ಸಹೋದರರಿಗಿಂತ ಹೆಚ್ಚಾಗಿ ನಿನಗೆ ಕೊಟ್ಟಿದ್ದೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲನು ಯೋಸೇಫನಿಗೆ - ನನಗೆ ಮರಣ ಸಮೀಪಿಸಿದೆ; ಆದರೆ ದೇವರು ನಿಮ್ಮೊಂದಿಗಿದ್ದು ನಿಮ್ಮನ್ನು ಪಿತೃಗಳ ದೇಶಕ್ಕೆ ತಿರಿಗಿ ಬರಮಾಡುವನು.
Kannada Bible (KNCL) BSI 2016
ಬಳಿಕ ಯಕೋಬನು ಜೋಸೆಫನಿಗೆ, “ನನಗೆ ಮರಣ ಸಮೀಪಿಸಿದೆ; ಆದರೆ ದೇವರು ನಿಮ್ಮೊಂದಿಗಿದ್ದು ನಿಮ್ಮನ್ನು ಪಿತೃಗಳ ನಾಡಿಗೆ ಮರಳಿ ಬರಮಾಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಇಸ್ರಾಯೇಲನು ಯೋಸೇಫನಿಗೆ, “ನಾನು ಸಾಯುತ್ತೇನೆ, ಆದರೆ ದೇವರು ನಿಮ್ಮ ಸಂಗಡವಿದ್ದು, ನಿಮ್ಮನ್ನು ನಿಮ್ಮ ಪಿತೃಗಳ ದೇಶಕ್ಕೆ ಮತ್ತೆ ಸೇರಿಸುವರು.