Genesis 48:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಇಸ್ರೇಲನು ಯೋಸೇಫನಿಗೆ, “ಸರ್ವಶಕ್ತನಾದ ದೇವರು ನನಗೆ ಕಾನಾನ್ ದೇಶದ ಲೂಜ್ ಎಂಬ ಸ್ಥಳದಲ್ಲಿ ಕಾಣಿಸಿಕೊಂಡು ನನ್ನನ್ನು ಆಶೀರ್ವದಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೋಬನು, ಯೋಸೇಫನಿಗೆ, “ಸರ್ವಶಕ್ತನಾದ ದೇವರು ಕಾನಾನ್ ದೇಶದ ಲೂಜ್ ಎಂಬಲ್ಲಿ ನನಗೆ ದರ್ಶನ ಕೊಟ್ಟು ಆಶೀರ್ವದಿಸಿದನು.
Kannada BSI Bible 2016
ಆಗ ಯಾಕೋಬನು ಯೋಸೇಫ ನಿಗೆ ಸರ್ವಶಕ್ತನಾದ ದೇವರು ಕಾನಾನ್‌ದೇಶದ ಲೂಜ್‌ ಎಂಬಲ್ಲಿ ನನಗೆ ಕಾಣಿಸಿಕೊಂಡು ನನ್ನನ್ನು ಆಶೀರ್ವದಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕೋಬನು ಯೋಸೇಫನಿಗೆ - ಸರ್ವಶಕ್ತನಾದ ದೇವರು ಕಾನಾನ್‍ದೇಶದ ಲೂಜಿನಲ್ಲಿ ನನಗೆ ದರ್ಶನಕೊಟ್ಟು ಆಶೀರ್ವದಿಸಿ -
Kannada Bible (KNCL) BSI 2016
ಅವನು ಜೋಸೆಫನಿಗೆ, “ಸರ್ವವಲ್ಲಭರಾದ ದೇವರು ಕಾನಾನ್ ನಾಡಿನ ಲೂಜಿನಲ್ಲಿ ನನಗೆ ದರ್ಶನಕೊಟ್ಟು, ಆಶೀರ್ವದಿಸಿ -
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯಾಕೋಬನು ಯೋಸೇಫನಿಗೆ, “ಸರ್ವಶಕ್ತ ದೇವರು ಕಾನಾನ್ ದೇಶದ ಲೂಜ್ ಎಂಬಲ್ಲಿ ನನಗೆ ಕಾಣಿಸಿಕೊಂಡು, ನನ್ನನ್ನು ಆಶೀರ್ವದಿಸಿದರು.