Genesis 48:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ನನಗೆ, ‘ನಾನು ನಿನಗೆ ಅನೇಕ ಮಕ್ಕಳನ್ನು ಕೊಡುತ್ತೇನೆ; ನಿನ್ನ ಸಂತತಿಯವರು ಅನೇಕ ಜನಾಂಗಗಳಾಗುವರು; ನಿನ್ನ ಸಂತತಿಯವರಿಗೆ ನಾನು ಈ ದೇಶವನ್ನು ಶಾಶ್ವತವಾಗಿ ಕೊಡುವೆನು’ ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ನನಗೆ, ‘ನಿನ್ನನ್ನು ಅಭಿವೃದ್ಧಿಪಡಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು. ಅನೇಕ ಜನಾಂಗಗಳು ನಿನ್ನಿಂದುಟಾಗುವಂತೆ ಮಾಡುವೆನು. ನಿನ್ನ ತರುವಾಯ ನಿನ್ನ ಸಂತತಿಗೆ ಈ ದೇಶವನ್ನು ಶಾಶ್ವತ ಸೊತ್ತನ್ನಾಗಿ ಕೊಡುವೆನು’” ಎಂದು ಹೇಳಿದನು.
Kannada BSI Bible 2016
ಆತನು ನನಗೆ--ಇಗೋ, ನಿನ್ನನ್ನು ಅಭಿವೃದ್ಧಿಪಡಿಸಿ ಹೆಚ್ಚಿಸಿ ಜನ ಸಮೂಹವನ್ನಾಗಿ ಮಾಡಿ ನಿನ್ನ ತರುವಾಯ ಹುಟ್ಟುವ ನಿನ್ನ ಸಂತತಿಗೆ ಈ ದೇಶವನ್ನು ಶಾಶ್ವತ ಸ್ವಾಸ್ಥ್ಯವಾಗಿ ಕೊಡುತ್ತೇನೆ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿನ್ನನ್ನು ಅಭಿವೃದ್ಧಿಪಡಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು; ಅನೇಕ ಜನಾಂಗಗಳು ನಿನ್ನಿಂದುಂಟಾಗುವಂತೆ ಮಾಡುವೆನು; ನಿನ್ನ ತರುವಾಯ ನಿನ್ನ ಸಂತತಿಗೆ ಈ ದೇಶವನ್ನು ಶಾಶ್ವತ ಸ್ವಾಸ್ತ್ಯವನ್ನಾಗಿ ಕೊಡುವೆನು ಎಂದು ಹೇಳಿದನು.
Kannada Bible (KNCL) BSI 2016
‘ನಾನು ನಿನ್ನನ್ನು ಫಲಪ್ರದನನ್ನಾಗಿ ಮಾಡಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು; ಅನೇಕ ಜನರಿಗೆ ನಿನ್ನನ್ನು ಮೂಲಪುರುಷನನ್ನಾಗಿ ಮಾಡುವೆನು; ನಿನ್ನ ತರುವಾಯ ನಿನ್ನ ಸಂತತಿಗೆ ಈ ನಾಡನ್ನು ಶಾಶ್ವತ ಸೊತ್ತನ್ನಾಗಿ ಕೊಡುವೆನು,’ ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ನನಗೆ, ‘ನಿನ್ನನ್ನು ಅಭಿವೃದ್ಧಿಪಡಿಸಿ, ನಿನ್ನ ಸಂತತಿಯನ್ನು ಹೆಚ್ಚಿಸುವೆನು. ಅನೇಕ ಜನಾಂಗಗಳು ನಿನ್ನಿಂದುಟಾಗುವಂತೆ ಮಾಡುವೆನು, ನಿನ್ನ ತರುವಾಯ ನಿನ್ನ ಸಂತತಿಗೂ ಈ ದೇಶವನ್ನು ಶಾಶ್ವತವಾದ ಸ್ವತ್ತನ್ನಾಗಿ ಕೊಡುತ್ತೇನೆ,’ ಎಂದು ಹೇಳಿದರು.