Genesis 48:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋಸೇಫನು ತನ್ನ ತಂದೆಗೆ, “ಇವರು ನನ್ನ ಮಕ್ಕಳು. ದೇವರು ನನಗೆ ಕೊಟ್ಟಿರುವ ಗಂಡುಮಕ್ಕಳೇ ಇವರು” ಎಂದು ಹೇಳಿದನು. ಇಸ್ರೇಲನು, “ಅವರನ್ನು ನನ್ನ ಬಳಿಗೆ ಕರೆದುಕೊಂಡು ಬಾ, ನಾನು ಅವರನ್ನು ಆಶೀರ್ವದಿಸುತ್ತೇನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಸೇಫನು ತನ್ನ ತಂದೆಗೆ, “ಇವರು ಈ ದೇಶದಲ್ಲಿ ನನಗೆ ದೇವರು ಅನುಗ್ರಹಿಸಿದ ಮಕ್ಕಳು” ಎಂದು ಹೇಳಿದನು. ಅದಕ್ಕವನು, “ನಾನು ಇವರನ್ನು ಆಶೀರ್ವದಿಸುತ್ತೇನೆ. ನನ್ನ ಹತ್ತಿರ ಕರೆದುಕೊಂಡು ಬಾ” ಎಂದನು.
Kannada BSI Bible 2016
ಅದಕ್ಕೆ ಯೋಸೇಫನು ತನ್ನ ತಂದೆಗೆ--ದೇವರು ಈ ಸ್ಥಳದಲ್ಲಿ ನನಗೆ ಕೊಟ್ಟ ನನ್ನ ಕುಮಾರರು ಅಂದನು. ಆಗ ಅವನು ಅವರನ್ನು ನನ್ನ ಬಳಿಗೆ ಕರಕೊಂಡು ಬಾ. ನಾನು ಅವರನ್ನು ಆಶೀರ್ವದಿಸುತ್ತೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರು ಯಾರೆಂದು ಕೇಳಲು ಯೋಸೇಫನು ತನ್ನ ತಂದೆಗೆ - ಇವರು ಈ ದೇಶದಲ್ಲಿ ನನಗೆ ದೇವರು ಅನುಗ್ರಹಿಸಿದ ಮಕ್ಕಳು ಎಂದು ಹೇಳಿದನು. ಅದಕ್ಕವನು - ಇವರನ್ನು ನಾನು ಆಶೀರ್ವದಿಸುತ್ತೇನೆ; ನನ್ನ ಹತ್ತಿರಕ್ಕೆ ಕರಕೊಂಡು ಬಾ ಅಂದನು.
Kannada Bible (KNCL) BSI 2016
ಅದಕ್ಕೆ ಜೋಸೆಫನು, “ಈ ದೇಶದಲ್ಲಿ ದೇವರು ನನಗೆ ಅನುಗ್ರಹಿಸಿದ ಮಕ್ಕಳು,” ಎಂದನು. ಆಗ ತಂದೆ ಯಕೋಬನು, “ಇವರನ್ನು ನಾನು ಆಶೀರ್ವದಿಸುತ್ತೇನೆ; ನನ್ನ ಹತ್ತಿರಕ್ಕೆ ಕರೆದುಕೊಂಡು ಬಾ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಯೋಸೇಫನು ತನ್ನ ತಂದೆಗೆ, “ದೇವರು ಈ ಸ್ಥಳದಲ್ಲಿ ನನಗೆ ಕೊಟ್ಟ ನನ್ನ ಪುತ್ರರು,” ಎಂದನು. ಆಗ ಇಸ್ರಾಯೇಲನು, “ಅವರನ್ನು ನನ್ನ ಬಳಿಗೆ ಕರೆದುಕೊಂಡು ಬಾ. ನಾನು ಅವರನ್ನು ಆಶೀರ್ವದಿಸುತ್ತೇನೆ,” ಎಂದನು.