Genesis 49:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ತನ್ನ ಕತ್ತೆಯನ್ನು ದ್ರಾಕ್ಷೆಬಳ್ಳಿಗೆ ಕಟ್ಟುವನು; ತನ್ನ ಪ್ರಾಯದ ಕತ್ತೆಯನ್ನು ಉತ್ತಮವಾದ ದ್ರಾಕ್ಷೆಬಳ್ಳಿಗೆ ಕಟ್ಟುವನು. ಅವನು ಉತ್ತಮವಾದ ದ್ರಾಕ್ಷಾರಸದಿಂದ ತನ್ನ ಬಟ್ಟೆಗಳನ್ನು ತೊಳೆಯುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ತನ್ನ ವಾಹನ ಮೃಗವನ್ನು ವಿಶಿಷ್ಟವಾದ ದ್ರಾಕ್ಷಾಲತೆಗೆ ಕಟ್ಟುವನು. ದ್ರಾಕ್ಷಿಯ ಬಳ್ಳಿಗೆ ತನ್ನ ಕತ್ತೆಮರಿಯನ್ನು ಬಿಗಿಯುವನು; ದ್ರಾಕ್ಷಾರಸದಲ್ಲಿ ತನ್ನ ಅಂಗಿಗಳನ್ನು ಒಗೆಯುವನು; ದ್ರಾಕ್ಷಾರಸದಲ್ಲಿಯೇ ತನ್ನ ವಸ್ತ್ರಗಳನ್ನು ಅದ್ದಿ ತೊಳೆಯುವನು.
Kannada BSI Bible 2016
ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಯನ್ನೂ ಶ್ರೇಷ್ಠ ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಮರಿಯನ್ನೂ ಕಟ್ಟುತ್ತಾನೆ. ದ್ರಾಕ್ಷಾರಸದಲ್ಲಿ ತನ್ನ ವಸ್ತ್ರಗಳನ್ನೂ ದ್ರಾಕ್ಷೇ ಹಣ್ಣುಗಳ ರಕ್ತದಲ್ಲಿ ತನ್ನ ಬಟ್ಟೆಗಳನ್ನೂ ತೊಳೆಯುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ತನ್ನ ವಾಹನಪಶುವನ್ನು ದ್ರಾಕ್ಷಾಲತೆಗೆ ಕಟ್ಟುವನು, ರಾಜದ್ರಾಕ್ಷೆಗೆ ತನ್ನ ಕತ್ತೆಯನ್ನು ಬಿಗಿಯುವನು; ದ್ರಾಕ್ಷಾರಸದಲ್ಲಿ ತನ್ನ ಬಟ್ಟೆಗಳನ್ನು ಒಗೆಯುವನು, ದ್ರಾಕ್ಷಾರಸದಲ್ಲಿಯೇ ತನ್ನ ವಸ್ತ್ರಗಳನ್ನು ಅದ್ದಿ ತೊಳೆಯುವನು:
Kannada Bible (KNCL) BSI 2016
ಕಟ್ಟುವನು ತನ್ನ ವಾಹನಪಶುವನು ದ್ರಾಕ್ಷಾಲತೆಗೆ ಬಿಗಿಯುವನು ತನ್ನ ಹೇಸರಕತ್ತೆಯನು ರಾಜದ್ರಾಕ್ಷೆಗೆ ಒಗೆಯುವನು ತನ್ನ ಬಟ್ಟೆಯನು ದ್ರಾಕ್ಷಾರಸದಲಿ ತೊಳೆವನು ಮೇಲಂಗಿಯನು ಆ ರಕ್ತಗೆಂಪು ರಸದಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ತನ್ನ ವಾಹನ ಪಶುವನ್ನು ದ್ರಾಕ್ಷಾಲತೆಗೆ ಕಟ್ಟುವನು. ರಾಜದ್ರಾಕ್ಷೆಗೆ ತನ್ನ ಕತ್ತೆಯನ್ನು ಬಿಗಿಯುವನು. ದ್ರಾಕ್ಷಾರಸದಲ್ಲಿ ತನ್ನ ಬಟ್ಟೆ ಒಗೆಯುವನು, ದ್ರಾಕ್ಷಾರಸದಲ್ಲಿಯೇ ತನ್ನ ವಸ್ತ್ರಗಳನ್ನು ಅದ್ದಿ ತೊಳೆಯುವನು.