Genesis 49:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾನನು ರಸ್ತೆಯ ಬಳಿಯಲ್ಲಿರುವ ಹಾವಿನಂತಿರುವನು.” ದಾರಿಯ ಸಮೀಪದಲ್ಲಿ ಮಲಗಿದ್ದು ಕುದುರೆಯ ಹಿಮ್ಮಡಿಯನ್ನು ಕಚ್ಚಿ ಸವಾರನನ್ನು ಬೀಳಿಸುವ ವಿಷಸರ್ಪದಂತಿರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾನನು ಮಾರ್ಗದ ಮಧ್ಯದಲ್ಲಿರುವ ವಿಷಸರ್ಪದಂತೆ ಇರುವನು ಅದು ಕುದುರೆಯ ಹಿಮ್ಮಡಿಯನ್ನು ಕಚ್ಚುವುದು. ಸವಾರನು ಕೆಳಗೆ ಅಂಗಾತವಾಗಿ ಬೀಳುವನು.
Kannada BSI Bible 2016
ದಾನನು ಮಾರ್ಗದಲ್ಲಿರುವ ಸರ್ಪವೂ ದಾರಿಯಲ್ಲಿರುವ ಹಾವೂ ಆಗಿರುವನು. ಕುದುರೆಯ ಹಿಮ್ಮಡಿಯನ್ನು ಕಚ್ಚಿದರೆ ಹತ್ತಿದವನು ಬೋರಲು ಬೀಳುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾನನು ದಾರಿಯಲ್ಲಿರುವ ಹಾವಿನಂತೆಯೂ ಮಾರ್ಗದಲ್ಲಿ ಕುದುರೆಯ ಹಿಮ್ಮಡಿಯನ್ನು ಕಚ್ಚಿ ಸವಾರನನ್ನು ಕೆಡಹುವ ವಿಷ ಸರ್ಪದಂತೆಯೂ ಆಗಿರುವನು.
Kannada Bible (KNCL) BSI 2016
ಇರುವನವನು ದಾರಿಯಲ್ಲಿರುವ ವಿಷಸರ್ಪದಂತೆ, ಕುದುರೆಯ ಹಿಮ್ಮಡಿಕಚ್ಚಿ ರಾಹುತನನು ಕೆಡವುವ ಹಾವಿನಂತೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾನನು ಮಾರ್ಗದಲ್ಲಿರುವ ಸರ್ಪವೂ ದಾರಿಯಲ್ಲಿರುವ ಹಾವೂ ಆಗಿರುವನು. ಕುದುರೆಯ ಹಿಮ್ಮಡಿಯನ್ನು ಕಚ್ಚಿದರೆ, ಹತ್ತಿದವನು ಬೋರಲು ಬೀಳುವನು.