Genesis 49:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯೋಸೇಫನು ಬಹು ಯಶಸ್ವಿಯಾಗಿದ್ದಾನೆ. ಯೋಸೇಫನು ಹಣ್ಣನ್ನು ಅಧಿಕವಾಗಿ ಫಲಿಸುವ ದ್ರಾಕ್ಷೆ ಬಳ್ಳಿಯಂತಿರುವನು. ಅವನು ವಸಂತಕಾಲದಲ್ಲಿ ಬೆಳೆಯುವ ದ್ರಾಕ್ಷೆಬಳ್ಳಿಯಂತಿರುವನು. ಅವನು ಗೋಡೆಯ ಆಚೆಗೆ ಚಾಚಿಕೊಂಡಿರುವ ದ್ರಾಕ್ಷೆಬಳ್ಳಿಯಂತಿರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಸೇಫನು ಫಲಭರಿತವಾದ ವೃಕ್ಷವು, ಒರತೆಯ ಬಳಿಯಲ್ಲಿರುವ ಫಲವತ್ತಾದ ವೃಕ್ಷವೇ ಆಗಿದ್ದಾನೆ. ಗೋಡೆಯ ಆಚೆಗೆ ಅದರ ರೆಂಬೆಗಳು ಹರಡಿವೆ.
Kannada BSI Bible 2016
ಯೋಸೇಫನು ಫಲಭರಿತವಾದ ಕೊಂಬೆ. ಬಾವಿಯ ಬಳಿಯಲ್ಲಿರುವ ಫಲಭರಿತವಾದ ಕೊಂಬೆ. ಅದರ ಕವಲುಗಳು ಗೋಡೆಯನ್ನು ದಾಟುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಸೇಫನು ಬಹುಫಲವನ್ನು ಬಿಡುವ ವೃಕ್ಷಕ್ಕೆ ಸಮಾನನಾಗಿದ್ದಾನೆ, ಒರತೆಯ ಬಳಿಯಲ್ಲಿ ಬೆಳೆದು ರೆಂಬೆಗಳನ್ನು ಗೋಡೆಯ ಆಚೆಗೆ ಚಾಚಿರುವ ಫಲವೃಕ್ಷದಂತಿದ್ದಾನೆ.
Kannada Bible (KNCL) BSI 2016
ಜೋಸೆಫನು ಫಲಭರಿತ ವೃಕ್ಷದಂತೆ ಒರತೆ ಬಳಿಯಲೆ ಬೆಳೆದ ದ್ರಾಕ್ಷಿಯಂತೆ ಚಾಚಿದೆ ಅದರ ರೆಂಬೆ ಬೇಲಿಯಿಂದಾಚೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೋಸೇಫನು ಫಲಭರಿತವಾದ ದ್ರಾಕ್ಷಿಬಳ್ಳಿ ಕಾಲುವೆಗಳ ಬಳಿಯಲ್ಲಿರುವ ಫಲಭರಿತ ದ್ರಾಕ್ಷಿಬಳ್ಳಿ, ಅದರ ಕೊಂಬೆಗಳು ಗೋಡೆಗಳನ್ನೇರುತ್ತವೆ.