Genesis 49:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ತಂದೆತಾಯಿಗಳಿಗೆ ಅನೇಕಾನೇಕ ಒಳ್ಳೆಯ ಸಂಗತಿಗಳು ಸಂಭವಿಸಿದವು. ನಿನ್ನ ತಂದೆಯಾದ ನಾನು ಅದಕ್ಕಿಂತಲೂ ಹೆಚ್ಚು ಆಶೀರ್ವಾದ ಹೊಂದಿಕೊಂಡೆನು. ನಿನ್ನ ಸಹೋದರರು ನಿನ್ನನ್ನು ದೂರಮಾಡಲು ಪ್ರಯತ್ನಿಸಿದರು. ಆದರೆ ಈಗ ನನ್ನ ಎಲ್ಲಾ ಆಶೀರ್ವಾದಗಳು ನಿನ್ನ ಮೇಲೆ ಎತ್ತರವಾದ ಬೆಟ್ಟದೋಪಾದಿಯಲ್ಲಿ ರಾಶಿಯಂತಿವೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ತಂದೆಯ ಆಶೀರ್ವಾದಗಳು ನಿನ್ನ ಪೂರ್ವಿಕರ ಆಶೀರ್ವಾದಕ್ಕಿಂತಲೂ ಮೀಗಿಲಾಗಿರುತ್ತದೆ. ಆದಿಯಿಂದಲೂ ಪರ್ವತಗಳಿಂದ ಉಂಟಾಗುವ ಎಲ್ಲಾ ಮೇಲುಗಳಿಗಿಂತಲೂ, ಸದಾಕಾಲ ಪ್ರಕೃತಿಯಿಂದ ಉಂಟಾಗುವ ಎಲ್ಲಾ ಸುಫಲಗಳು ಕೊನೆಯವರೆಗೂ ಯೋಸೇಫನಿಗೂ ಅವನ ಅಣ್ಣತಮ್ಮಂದಿರಿಗೂ ಸಮೃದ್ಧಿಯಾಗಿ ದೊರೆಯುವುದು.
Kannada BSI Bible 2016
ನಿನ್ನ ತಂದೆಯ ಆಶೀರ್ವಾದಗಳು ನನ್ನ ಹೆತ್ತವರ ಆಶೀರ್ವಾದಗಳನ್ನು ನಿತ್ಯ ಗುಡ್ಡಗಳ ಮೇರೆಗಿಂತ ವಿಾರಿವೆ. ಯೋಸೇಫನ ತಲೆಯ ಮೇಲೆಯೂ ತನ್ನ ಸಹೋದರರಿಂದ ಪ್ರತ್ಯೇಕ ಮಾಡಲ್ಪಟ್ಟವನ ತಲೆಯ ಮೇಲೆಯೂ ಅವು ಬರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ತಂದೆಯ ಆಶೀರ್ವಾದಗಳು ಆದಿಯಿಂದಿದ್ದ ಪರ್ವತಗಳಿಂದುಟಾಗುವ ಮೇಲುಗಳಿಗಿಂತಲೂ ಸದಾಕಾಲವಾಗಿರುವ ಬೆಟ್ಟಗಳಿಂದುಂಟಾಗುವ ಉತ್ತಮ ವಸ್ತುಗಳಿಗಿಂತಲೂ ವಿಶೇಷವಾಗಿವೆ. ಇವೆಲ್ಲಾ ಯೋಸೇಫನ ಪಾಲಿಗೆ ಬರಲಿ; ಅಣ್ಣತಮ್ಮಂದಿರಲ್ಲಿ ಪ್ರಭುವಾಗಿರುವವನ ಶಿರಸ್ಸಿನ ಮೇಲುಂಟಾಗಲಿ.
Kannada Bible (KNCL) BSI 2016
ಪ್ರಾಚೀನ ಪರ್ವತಗಳಿಗಿ0ತ, ಚಿರಸ್ಥಾಯಿ ಗುಡ್ಡಗಳಿಗಿಂತ ಉತ್ತಮೋತ್ತಮ ನಿನ್ನ ತಂದೆಯಿಂದ ಬರುವ ಆಶೀರ್ವಾದ. ಇಳಿದು ಬರಲೀ ವರದಾನಗಳು ಜೋಸೆಫನ ಮೇಲೆ ಸೋದರರಿಂದ ಬೇರ್ಪಟ್ಟವನ ಶಿರಸ್ಸಿನ ಮೇಲೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪುರಾತನ ಪರ್ವತಗಳ ಆಶೀರ್ವಾದಗಳಿಗಿಂತ ನಿನ್ನ ತಂದೆಯ ಆಶೀರ್ವಾದಗಳು ಶ್ರೇಷ್ಠವಾದವುಗಳು. ಅವು ಪುರಾತನ ಶಿಖರಗಳ ಐಶ್ವರ್ಯಕ್ಕಿಂತ ಹೆಚ್ಚಿನವುಗಳು. ಇವೆಲ್ಲವೂ ಯೋಸೇಫನ ತಲೆಯ ಮೇಲೆ ಅಂದರೆ, ತನ್ನ ಸಹೋದರರಲ್ಲಿ ರಾಜಕುಮಾರನಾದವನ ಹಣೆಯ ಮೇಲಿರಲಿ.