Genesis 49:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇವು ಇಸ್ರೇಲನ ಹನ್ನೆರಡು ಕುಲಗಳು. ಈ ವಿಷಯಗಳನ್ನೆಲ್ಲ ಅವರ ತಂದೆಯಾದ ಇಸ್ರೇಲನು ಅವರಿಗೆ ಹೇಳಿದನು. ಅವನು ತನ್ನ ಪ್ರತಿಯೊಬ್ಬ ಗಂಡುಮಗನಿಗೆ ಅವನಿಗೆ ತಕ್ಕ ಆಶೀರ್ವಾದವನ್ನು ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರೆಲ್ಲರೂ ಇಸ್ರಾಯೇಲನಿಂದುಂಟಾದ ಹನ್ನೆರಡು ಕುಲಗಳು. ಅವರ ತಂದೆ ಅವರನ್ನು ಆಶೀರ್ವದಿಸಿ ಹೇಳಿದ ನುಡಿಗಳು ಇವುಗಳೇ. ಅವನು ಪ್ರತಿಯೊಬ್ಬನಿಗೂ ಅವನವನಿಗೆ ತಕ್ಕ ಆಶೀರ್ವಾದದ ಪ್ರಕಾರ ಆಶೀರ್ವಚನಗಳನ್ನು ನುಡಿದನು.
Kannada BSI Bible 2016
ಇವರೆಲ್ಲಾ ಇಸ್ರಾಯೇಲನ ಹನ್ನೆರಡು ಗೋತ್ರ ಗಳು; ಅವರ ತಂದೆ ಅವರಿಗೆ ಹೇಳಿದ್ದು ಇದೇ. ಅವನು ಒಬ್ಬೊಬ್ಬನನ್ನು ಅವನವನ ಆಶೀರ್ವಾದದ ಪ್ರಕಾರ ಆಶೀರ್ವದಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರೆಲ್ಲರೂ ಇಸ್ರಾಯೇಲನಿಂದುಂಟಾದ ಹನ್ನೆರಡು ಕುಲಗಳು. ಇದೇ ಅವರ ತಂದೆ ಅವರಿಗೆ ಹೇಳಿದ ಆಶೀರ್ವಾದ. ಒಂದೊಂದು ಕುಲಕ್ಕೆ ಒಂದೊಂದು ಆಶೀರ್ವಚನವನ್ನು ನುಡಿದನು.
Kannada Bible (KNCL) BSI 2016
ಇವೇ ಇಸ್ರಯೇಲಿನ ಹನ್ನೆರಡು ಕುಲಗೋತ್ರಗಳು; ಇದೇ ಅವರ ತಂದೆ ಕೊಟ್ಟ ಆಶೀರ್ವಾದ: ಒಂದೊಂದು ಕುಲಕ್ಕೆ ಅವನು ನುಡಿದ ಒಂದೊಂದು ಆಶೀರ್ವಚನ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರೆಲ್ಲಾ ಇಸ್ರಾಯೇಲಿನ ಹನ್ನೆರಡು ಗೋತ್ರಗಳು. ಅವರ ತಂದೆ ಅವರಿಗೆ ಹೇಳಿದ್ದೂ ಇದೇ. ಅವನು ಒಬ್ಬೊಬ್ಬನನ್ನೂ ಅವನಿಗೆ ತಕ್ಕ ಆಶೀರ್ವಾದದ ಪ್ರಕಾರ ಆಶೀರ್ವದಿಸಿದನು.