Genesis 49:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಬ್ರಹಾಮನನ್ನು ಮತ್ತು ಅವನ ಹೆಂಡತಿಯಾದ ಸಾರಳನ್ನು ಆ ಗವಿಯಲ್ಲಿ ಸಮಾಧಿ ಮಾಡಲಾಗಿದೆ. ಇಸಾಕನನ್ನು ಮತ್ತು ರೆಬೆಕ್ಕಳನ್ನು ಅಲ್ಲಿ ಸಮಾಧಿ ಮಾಡಲಾಗಿದೆ. ನನ್ನ ಹೆಂಡತಿಯಾದ ಲೇಯಳನ್ನು ನಾನು ಅಲ್ಲಿ ಸಮಾಧಿ ಮಾಡಿದ್ದೇನೆ. ಬೆನ್ಯಾಮೀನ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿ ಅಬ್ರಹಾಮನಿಗೂ ಅವನ ಪತ್ನಿಯಾದ ಸಾರಳಿಗೂ ಸಮಾಧಿಯಾಯಿತು. ಅಲ್ಲೇ ಇಸಾಕನಿಗೂ ಅವನ ಹೆಂಡತಿಯಾದ ರೆಬೆಕ್ಕಳಿಗೂ ಸಮಾಧಿಯಾಯಿತು. ಅಲ್ಲಿ ನಾನು ಲೇಯಳನ್ನು ಸಮಾಧಿಮಾಡಿದ್ದೇನೆ.
Kannada BSI Bible 2016
ಅಲ್ಲಿ ಅಬ್ರಹಾಮನನ್ನೂ ಅವನ ಹೆಂಡತಿಯಾದ ಸಾರಳನ್ನೂ ಹೂಣಿಟ್ಟರು. ಅಲ್ಲಿ ಇಸಾಕನನ್ನೂ ಅವನ ಹೆಂಡತಿಯಾದ ರೆಬೆಕ್ಕಳನ್ನೂ ಹೂಣಿಟ್ಟರು. ಅಲ್ಲಿ ನಾನು ಲೇಯಳನ್ನೂ ಹೂಣಿಟ್ಟೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿ ಅಬ್ರಹಾಮನಿಗೂ ಅವನ ಪತ್ನಿಯಾದ ಸಾರಳಿಗೂ ಸಮಾಧಿಯಾಯಿತು; ಅಲ್ಲಿ ಇಸಾಕನಿಗೂ ಅವನ ಹೆಂಡತಿಯಾದ ರೆಬೆಕ್ಕಳಿಗೂ ಸಮಾಧಿಯಾಯಿತು; ಅಲ್ಲಿ ನಾನು ಲೇಯಳನ್ನೂ ಹೂಣಿಟ್ಟೆನು.
Kannada Bible (KNCL) BSI 2016
ಅಲ್ಲೇ ಅಬ್ರಹಾಮನಿಗೂ ಅವನ ಪತ್ನಿ ಸಾರಳಿಗೂ ಸಮಾಧಿಯಾಯಿತು. ಅಲ್ಲೇ ಇಸಾಕನಿಗೂ ಅವನ ಮಡದಿ ರೆಬೆಕ್ಕಳಿಗೂ ಸಮಾಧಿ ಆಯಿತು. ಲೇಯಳನ್ನೂ ನಾನು ಅಲ್ಲಿ ಸಮಾಧಿಮಾಡಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿ ಅಬ್ರಹಾಮನನ್ನೂ, ಅವನ ಹೆಂಡತಿ ಸಾರಳನ್ನೂ ಹೂಳಿದರು. ಅಲ್ಲಿ ಇಸಾಕನನ್ನೂ, ಅವನ ಹೆಂಡತಿ ರೆಬೆಕ್ಕಳನ್ನೂ ಹೂಳಿಟ್ಟರು. ಅಲ್ಲಿ ನಾನು ಲೇಯಳನ್ನೂ ಹೂಳಿದೆನು.