Genesis 49:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಗುಹೆಯನ್ನು ಮತ್ತು ಆ ಗುಹೆಯಿರುವ ಹೊಲವನ್ನು ಹಿತ್ತಿಯರಿಂದ ಕೊಂಡುಕೊಳ್ಳಲಾಗಿದೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೊಲದೊಂದಿಗೆ ಹಿತ್ತಿಯರಿಂದ ಕ್ರಯಕ್ಕೆ ತೆಗೆದುಕೊಂಡ ಆ ಗುಹೆಯೊಳಗೆ ನನಗೂ ಸಮಾಧಿಮಾಡಬೇಕು” ಎಂದನು.
Kannada BSI Bible 2016
ಆ ಹೊಲವೂ ಅದರಲ್ಲಿರುವ ಗವಿಯೂ ಹೇತನ ಮಕ್ಕಳಿಂದ ಕೊಂಡುಕೊಂಡದ್ದು ಅಂದನು.ಯಾಕೋ ಬನು ತನ್ನ ಕುಮಾರರಿಗೆ ಆಜ್ಞಾಪಿಸಿ ಮುಗಿಸಿದ ಮೇಲೆ ತನ್ನ ಕಾಲುಗಳನ್ನು ಮಂಚದ ಮೇಲೆ ಮುದುರಿಕೊಂಡನು. ಅವನು ಪ್ರಾಣ ಬಿಟ್ಟು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೊಲದ ಕೂಡ ಹಿತ್ತಿಯರಿಂದ ಕ್ರಯಕ್ಕೆ ತೆಗೆದುಕೊಂಡ ಆ ಗವಿಯೊಳಗೆ ನನಗೂ ಸಮಾಧಿಮಾಡಬೇಕು ಅಂದನು.
Kannada Bible (KNCL) BSI 2016
ಹೊಲದ ಸಮೇತ ಹಿತ್ತಿಯರಿಂದ ಕ್ರಯಕ್ಕೆ ಕೊಂಡುಕೊಂಡ ಆ ಗವಿಯೊಳಗೆ ನನಗೂ ಸಮಾಧಿಯಾಗಲಿ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಹೊಲವೂ, ಅದರಲ್ಲಿರುವ ಗವಿಯೂ ಹಿತ್ತಿಯರಿಂದ ಕೊಂಡುಕೊಂಡದ್ದು,” ಎಂದನು.