Genesis 49:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಗುಟ್ಟಾಗಿ ಕೆಟ್ಟಕಾರ್ಯಗಳನ್ನು ಯೋಚಿಸಿದರು. ಅವರ ರಹಸ್ಯಕೂಟಗಳನ್ನು ನನ್ನ ಆತ್ಮವು ಸ್ವೀಕರಿಸುವುದಿಲ್ಲ. ಅವರು ಕೋಪಗೊಂಡಾಗ ಗಂಡಸರನ್ನು ಕೊಂದುಹಾಕಿದರು. ಅವರು ಮೋಜಿಗೆಂದೇ ಪ್ರಾಣಿಗಳನ್ನು ಹಿಂಸಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಪ್ರಾಣವೇ ಅವರ ಗುಪ್ತವಾದ ದುರಾಲೋಚನೆಗಳಿಗೆ ನೀನು ಒಳಪಡಬಾರದು. ನನ್ನ ಮನವೇ ಅವರ ಗುಂಪಿಗೆ ನೀನು ಸೇರಬೇಡ. ಆದುದರಿಂದ ನನ್ನ ಹೃದಯವು ಸಂತೋಷಿಸುತ್ತದೆ. ಅವರು ಕೋಪೋದ್ರೆಕದಿಂದ ಮನುಷ್ಯರನ್ನು ಸಂಹರಿಸಿದರು. ಮದದಿಂದ ಎತ್ತುಗಳನ್ನು ದುರ್ಬಲಗೊಳಿಸಿದರು.
Kannada BSI Bible 2016
ನನ್ನ ಪ್ರಾಣವೇ, ಅವರ ರಹಸ್ಯವಾದ ಸಭೆಯಲ್ಲಿ ಸೇರಬೇಡ.ನನ್ನ ಘನವೇ, ಅವರೊಂದಿಗೆ ಬೆರಿಕೆಯಾಗಬೇಡ; ಅವರು ತಮ್ಮ ಕೋಪದಲ್ಲಿ ಮನುಷ್ಯನನ್ನು ಕೊಂದರು. ಅವರು ಸ್ವಇಚ್ಛೆಯಿಂದ ಗೋಡೆಯನ್ನು ಕೆಡವಿಹಾಕಿ ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಪ್ರಾಣವೇ, ಅವರ ಗುಪ್ತವಾದ ದುರಾಲೋಚನೆಗೆ ನೀನು ಒಳಪಡಬಾರದು; ನನ್ನ ಮನವೇ, ಅವರ ಗುಂಪಿಗೆ ನೀನು ಸೇರಬೇಡ. ಅವರು ಕೋಪೋದ್ರೇಕದಿಂದ ಮನುಷ್ಯರನ್ನು ಸಂಹರಿಸಿದರು; ಮದದಿಂದ ಎತ್ತುಗಳನ್ನು ಊನಪಡಿಸಿದರು.
Kannada Bible (KNCL) BSI 2016
ನನ್ನ ಮನವೇ, ಒಳಗಾಗಬೇಡ ಅವರ ದುರಾಲೋಚನೆಗೆ ನನ್ನ ಪ್ರಾಣವೇ, ಸೇರಬೇಡ ನೀನವರ ಗುಂಪಿಗೆ ಕೊಂದರವರು ನರರನು ಕೋಪೋದ್ರೇಕದಿಂದ ಊನಪಡಿಸಿದರು ಎತ್ತುಗಳನ್ನು ಮದದಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಮನವೇ, ಅವರ ಆಲೋಚನೆಗೆ ಒಳಪಡಬೇಡ. ನನ್ನ ಪ್ರಾಣವೇ, ಅವರ ಕೂಟಗಳಲ್ಲಿ ಸೇರಬೇಡ. ಅವರು ತಮ್ಮ ಕೋಪದಲ್ಲಿ ಮನುಷ್ಯರನ್ನು ಕೊಂದರು, ಮದದಿಂದ ಎತ್ತುಗಳನ್ನು ಊನಪಡಿಸಿದರು.