Genesis 49:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರ ಕೋಪವೇ ಅವರಿಗೆ ಶಾಪ. ಅದು ತುಂಬಾ ಶಕ್ತಿಶಾಲಿಯಾದದ್ದು. ಅವರು ಹುಚ್ಚರಾದಾಗ ತುಂಬಾ ಕ್ರೂರಿಗಳು. ಅವರು ಯಾಕೋಬನ ನಾಡಿನಲ್ಲಿ ತಮ್ಮದೇ ಆದ ನಾಡನ್ನು ಹೊಂದಿಕೊಳ್ಳುವುದಿಲ್ಲ. ಅವರು ಇಸ್ರೇಲಿನಲ್ಲೆಲ್ಲಾ ಹರಡಿಕೊಳ್ಳುವರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದ್ದು ಅದು ಶಾಪಗ್ರಸ್ಥವಾದುದಾಗಿದೆ. ಯಾಕೋಬನ ಕುಲದವರಲ್ಲಿ ಅವರನ್ನು ವಿಭಾಗಿಸುವೆನು. ಇಸ್ರಾಯೇಲರಲ್ಲಿ ಅವರನ್ನು ಚದುರಿಸುವೆನು.
Kannada BSI Bible 2016
ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದೆ; ಅವು ಶಪಿಸಲ್ಪಡುವವು. ಯಾಕೋಬಿನಲ್ಲಿ ಅವರನ್ನು ವಿಭಾಗಿಸಿ ಇಸ್ರಾಯೇಲಿನಲ್ಲಿ ಅವರನ್ನು ಚದರಿಸಿಬಿಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದೆ; ಅದಕ್ಕೆ ಶಾಪವುಂಟಾಗಲಿ. ಯಾಕೋಬನ ಕುಲದವರಲ್ಲಿ ಅವರನ್ನು ವಿಭಾಗಿಸುವೆನು; ಇಸ್ರಾಯೇಲ್ಯರಲ್ಲಿ ಅವರನ್ನು ಚದರಿಸುವೆನು.
Kannada Bible (KNCL) BSI 2016
ಅವರ ಕೋಪ ಭೀಕರ, ಅದಕ್ಕಿರಲಿ ಧಿಕ್ಕಾರ! ಅವರ ರೌದ್ರ - ಕ್ರೂರ, ಅದಕ್ಕಿರಲಿ ಧಿಕ್ಕಾರ! ವಿಭಾಗಿಸುವೆನವರನು ಯಕೋಬ ಕುಲದಲಿ ಚದರಿಸುವೆನವರನು ಇಸ್ರಯೇಲರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದ್ದು, ಅದಕ್ಕೆ ಶಾಪಗ್ರಸ್ತವಾಗಲಿ. ಯಾಕೋಬನ ಕುಟುಂಬದಲ್ಲಿ ಅವರನ್ನು ವಿಭಾಗಿಸಿ ಇಸ್ರಾಯೇಲಿನಲ್ಲಿ ಅವರನ್ನು ಚದರಿಸಿಬಿಡುವೆನು.