Genesis 49:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯೆಹೂದನೇ, ನಿನ್ನ ಸಹೋದರರು ನಿನ್ನನ್ನೇ ಹೊಗಳುವರು. ನೀನು ನಿನ್ನ ವೈರಿಗಳನ್ನು ಸೋಲಿಸುವೆ. ನಿನ್ನ ಸಹೋದರರು ನಿನಗೇ ಅಡ್ಡಬೀಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದನೇ, ನಿನ್ನ ಅಣ್ಣತಮ್ಮಂದಿರು ನಿನ್ನನ್ನೇ ಸ್ತುತಿಸುವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವುದು. ನಿನ್ನ ಸಹೋದರರು ನಿನಗೆ ಆಡ್ಡ ಬೀಳುವರು.
Kannada BSI Bible 2016
ಯೆಹೂದನೇ, ನಿನ್ನ ಸಹೋದರರು ನಿನ್ನನ್ನು ಹೊಗಳು ವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವದು, ನಿನ್ನ ತಂದೆಯ ಮಕ್ಕಳು ನಿನಗೆ ಅಡ್ಡ ಬೀಳುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದನೇ, ನಿನ್ನ ಅಣ್ಣತಮ್ಮಂದಿರು ನಿನ್ನನ್ನೇ ಸ್ತುತಿಸುವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವದು; ನಿನ್ನ ಸಹೋದರರು ನಿನಗೇ ಎರಗುವರು.
Kannada Bible (KNCL) BSI 2016
ಯೆಹೂದನೇ, ವಂದಿಸುವರು ನಿನ್ನನು ಸಹೋದರರು ನಿನ್ನ ಕೈಯಲ್ಲಿರುವುದು ಶತ್ರುಗಳ ಕುತ್ತಿಗೆಯು ಎರಗುವರು ನಿನಗೆ ನಿನ್ನ ಅಣ್ಣತಮ್ಮಂದಿರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೆಹೂದನೇ, ನಿನ್ನ ಸಹೋದರರು ನಿನ್ನನ್ನು ಹೊಗಳುವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವುದು. ನಿನ್ನ ತಂದೆಯ ಮಕ್ಕಳು ನಿನಗೆ ಅಡ್ಡಬೀಳುವರು.