Genesis 49:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದನು ಪ್ರಾಣಿಯನ್ನು ಕೊಂದ ಪ್ರಾಯದ ಸಿಂಹದಂತಿದ್ದಾನೆ. ಮಗನೇ, ನೀನು ಸಿಂಹದಂತೆ ಬೇಟೆಗಾಗಿ ಹೊಂಚುಹಾಕಿ ನಿಂತಿರುವೆ. ಯೆಹೂದನು ಸಿಂಹದಂತಿರುವನು. ಅವನು ಮಲಗಿ ವಿಶ್ರಮಿಸಿಕೊಳ್ಳುವನು; ಅವನನ್ನು ಕೆಣಕಲು ಯಾರಿಗೂ ಧೈರ್ಯವಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದನು ಪ್ರಾಯದ ಸಿಂಹದಂತಿದ್ದಾನೆ. ನನ್ನ ಪುತ್ರನೇ, ನೀನು ಮೃಗವನ್ನು ಹಿಡಿದು ಕೊಂದು ಬೆಟ್ಟವನ್ನು ಸೇರಿದ ಸಿಂಹದೋಪಾದಿಯಲ್ಲಿದ್ದೀ. ಅವನು ಸಿಂಹದಂತೆ ಕಾಲು ಮುದುರಿ ಹೊಂಚುಹಾಕಿಕೊಂಡಿದ್ದಾನೆ. ಮೃಗ ರಾಜನಿಗೆ ಸಮನಾದ ಇವನನ್ನು ಕೆಣಕುವುದು ಯಾರಿಂದಾದೀತು?
Kannada BSI Bible 2016
ಯೆಹೂದನು ಸಿಂಹದ ಮರಿಯಾಗಿದ್ದಾನೆ. ನನ್ನ ಮಗನೇ, ಕೊಳ್ಳೆಯಿಂದ ಮೇಲಕ್ಕೆ ಬಂದಿ. ಅವನು ಸಿಂಹದಂತೆಯೂ ಪ್ರಾಯದ ಸಿಂಹದ ಹಾಗೆಯೂ ಮುದುರಿಕೊಂಡು ಮಲಗಿದ್ದಾನೆ. ಅವನನ್ನು ಕೆಣಕು ವವರು ಯಾರು?
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದನು ಪ್ರಾಯದ ಸಿಂಹದಂತಿದ್ದಾನೆ; ನನ್ನ ಪುತ್ರನೇ, ನೀನು ಮೃಗವನ್ನು ಹಿಡಿದು ಕೊಂದು ಬೆಟ್ಟವನ್ನು ಸೇರಿದ ಸಿಂಹದೋಪಾದಿಯಲಿದ್ದೀ. ಅವನು ಸಿಂಹದಂತೆ ಕಾಲುಮುದುರಿ ಹೊಂಚುಹಾಕಿಕೊಂಡಿದ್ದಾನೆ; ಮೃಗೇಂದ್ರನಿಗೆ ಸಮಾನನಾದ ಇವನನ್ನು ಕೆಣಕುವದು ಯಾರಿಂದಾದೀತು?
Kannada Bible (KNCL) BSI 2016
ನನ್ನ ಪುತ್ರ ಯೆಹೂದ, ನೀ ಪ್ರಾಯದ ಸಿಂಹದಂತೆ ಬೇಟೆಹಿಡಿದು ಬೆಟ್ಟ ಏರಿದ ಕಂಠೀರವನಂತೆ ಕಾಲು ಮಡಿಚಿ ಹೊಂಚು ಕೂತ ಕೇಸರಿಯಂತೆ ಈ ಸಿಂಹಿಣಿಯನ್ನು ಕೆಣಕುವ ಕೆಚ್ಚು ಯಾರಿಗಿದೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದನು ಸಿಂಹದ ಮರಿಯಾಗಿದ್ದಾನೆ. ನನ್ನ ಮಗನೇ, ಬೇಟೆಹಿಡಿದು ಮೇಲಕ್ಕೆ ಬಂದೆ. ಅವನು ಸಿಂಹದಂತೆಯೂ ಪ್ರಾಯದ ಸಿಂಹದ ಹಾಗೆಯೂ ಮುದುರಿಕೊಂಡು ಮಲಗಿದ್ದಾನೆ. ಅವನನ್ನು ಕೆಣಕುವವರು ಯಾರು?