Genesis 5:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ಅವರನ್ನು ಗಂಡು ಮತ್ತು ಹೆಣ್ಣುಗಳಾಗಿ ಉಂಟುಮಾಡಿದನು. ಆತನು ಅವರನ್ನು ನಿರ್ಮಿಸಿದ ದಿನದಲ್ಲೇ ಅವರನ್ನು ಆಶೀರ್ವದಿಸಿ ಅವರಿಗೆ, “ಮನುಷ್ಯ” ಎಂದು ಹೆಸರಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟು ಮಾಡಿದನು. ಇದಲ್ಲದೆ, ಅವರನ್ನು ಸೃಷ್ಟಿಸಿದ ದಿನದಲ್ಲಿ, ಅವರನ್ನು ಆಶೀರ್ವದಿಸಿ ಅವರಿಗೆ “ಮನುಷ್ಯ” ಎಂದು ಹೆಸರಿಟ್ಟನು.
Kannada BSI Bible 2016
ಆತನು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿಸಿದನು; ಅವರು ಸೃಷ್ಟಿಸಲ್ಪಟ್ಟ ದಿನದಲ್ಲಿ ಆತನು ಅವರನ್ನು ಆಶೀರ್ವದಿಸಿ ಅವರನ್ನು ಆದಾಮ ನೆಂದು ಕರೆದನು (ಹೆಸರಿಟ್ಟನು).
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರನ್ನು ಗಂಡು ಹೆಣ್ಣಾಗಿ ಉಂಟುಮಾಡಿದನು. ಇದಲ್ಲದೆ ಅದೇ ದಿವಸದಲ್ಲಿ ಅವರನ್ನು ಆಶೀರ್ವದಿಸಿ ಅವರಿಗೆ ಮನುಷ್ಯ ಎಂದು ಹೆಸರಿಟ್ಟನು.
Kannada Bible (KNCL) BSI 2016
ಅವರನ್ನು ಗಂಡನ್ನಾಗಿಯೂ ಹೆಣ್ಣನ್ನಾಗಿಯೂ ಮಾಡಿದರು. ಅಂದೇ ಅವರನ್ನು ಆಶೀರ್ವದಿಸಿ ಅವರಿಗೆ ‘ಮನುಷ್ಯ’ರೆಂದು ಹೆಸರಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿ ಮಾಡಿದರು. ಅದೇ ದಿನದಲ್ಲಿ ಅವರನ್ನು ಆಶೀರ್ವದಿಸಿ, ಅವರಿಗೆ “ಮನುಷ್ಯ” ಎಂದು ಕರೆದರು.