Genesis 5:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಲೆಮೆಕನು, “ನಾವು ರೈತರಾಗಿ ಕಷ್ಟಪಟ್ಟು ಕೆಲಸ ಮಾಡುತ್ತೇವೆ, ಯಾಕೆಂದರೆ ದೇವರು ಭೂಮಿಯನ್ನು ಶಪಿಸಿದನು. ಆದರೆ ಈ ಮಗನು ನಮಗೆ ವಿಶ್ರಾಂತಿ ಕೊಡುವನು” ಎಂದು ಹೇಳಿ ಆ ಮಗುವಿಗೆ ನೋಹ ಎಂದು ಹೆಸರಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನಿಗೆ “ನೋಹ” ಎಂದು ಹೆಸರಿಟ್ಟು, “ಯೆಹೋವನು ಶಾಪಕೊಟ್ಟ ಭೂಮಿಯಲ್ಲಿ ನಾವು ಕೈಕೆಸರಾಗಿಸಿಕೊಂಡು ಅನುಭವಿಸುತ್ತಿರುವ ಶ್ರಮೆಗೆ ಈ ಮಗನಿಂದ ಆದರಣೆ ಸಿಕ್ಕುವುದು” ಎಂದು ಹೇಳಿದನು.
Kannada BSI Bible 2016
ಅವನಿಗೆ ನೋಹ ಎಂದು ಕರೆದು--ಕರ್ತನು ಭೂಮಿಯನ್ನು ಶಪಿಸಿದ್ದರಿಂದ ನಮಗೆ ಉಂಟಾದ ಕೈಕಷ್ಟದಲ್ಲಿಯೂ ಪ್ರಯಾಸದಲ್ಲಿಯೂ ಇವನೇ ನಮ್ಮನ್ನು ಆದರಿಸುವನು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಶಪಿಸಿದ ಭೂವಿುಯಿಂದ ನಮಗೆ ಉಂಟಾದ ಕೈಕಷ್ಟದಲ್ಲಿಯೂ ಶ್ರಮೆಯಲ್ಲಿಯೂ ಈ ಮಗನು ನಮ್ಮನ್ನು ಉಪಶಮನಗೊಳಿಸುವನು ಎಂದು ಹೇಳಿ ಅವನಿಗೆ ನೋಹ ಎಂದು ಹೆಸರಿಟ್ಟನು.
Kannada Bible (KNCL) BSI 2016
ಪ್ರಭು ಶಪಿಸಿದ ಭೂಮಿಯಲ್ಲಿ ನಾವು ಕೈಕೆಸರಾಗಿಸಿಕೊಂಡು ಪಡುವ ಶ್ರಮೆಯಲ್ಲಿ ಈ ಮಗನು ಉಪಶಮನ ತರುವನು ಎಂದುಕೊಂಡು ಅವನಿಗೆ ನೋಹ ಎಂದು ಹೆಸರಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನಿಗೆ, ನೋಹ ಎಂದು ಹೆಸರಿಟ್ಟು, “ಯೆಹೋವ ದೇವರು ಶಪಿಸಿದ ಭೂಮಿಯಿಂದ ನಮಗೆ ಉಂಟಾದ ಕಷ್ಟದಲ್ಲಿಯೂ ಪ್ರಯಾಸದಲ್ಲಿಯೂ ಇವನೇ ನಮ್ಮನ್ನು ಉಪಶಮನಗೊಳಿಸುವನು,” ಎಂದು ಹೇಳಿದನು.