Genesis 50:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕಾನಾನಿನ ಜನರು ಗೋರೆನ್‌ಅಟಾದ್‌ನಲ್ಲಿ ಶೋಕಿಸುತ್ತಿರುವುದನ್ನು ನೋಡಿ, “ಈಜಿಪ್ಟಿನವರು ಬಹಳ ದುಃಖಕರವಾದ ಅಂತ್ಯಕ್ರಿಯೆಯನ್ನು ಮಾಡುತ್ತಿದ್ದಾರೆ” ಎಂದು ಹೇಳಿದರು. ಆದ್ದರಿಂದ ಆ ಸ್ಥಳಕ್ಕೆ ಆಬೇಲ್ ಮಿಚ್ರಯೀಮ್ ಎಂದು ಹೆಸರಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದೇಶದ ಜನರಾಗಿದ್ದ ಕಾನಾನ್ಯರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣದಲ್ಲಿ ನಡೆದ ಗೋಳಾಟವನ್ನು ನೋಡಿ ಐಗುಪ್ತರಿಗೆ ಬಂದಿರುವ ಈ ಶೋಕವು ಬಹು ವಿಶೇಷವಾಗಿದೆ ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ “ ಆಬೇಲ್ ಮಿಚ್ರಯಿಮ್” ಎಂದು ಹೆಸರಾಯಿತು.
Kannada BSI Bible 2016
ದೇಶದ ನಿವಾಸಿಗಳಾದ ಕಾನಾನ್ಯರು ಆಟಾದ್‌ ಕಣದಲ್ಲಿ ಆಗುತ್ತಿದ್ದ ದುಃಖವನ್ನು ನೋಡಿ--ಇದು ಐಗುಪ್ತ್ಯರಿಗೆ ಘೋರವಾದ ದುಃಖ ಎಂದು ಹೇಳಿದರು. ಆದದರಿಂದ ಅದಕ್ಕೆ ಆಬೇಲ್‌ ಮಿಚ್ರಯಾಮ್‌ ಎಂದು ಹೆಸರಾಯಿತು. ಅದು ಯೊರ್ದನಿನ ಆಚೆಯಲ್ಲಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದೇಶದ ಜನರಾಗಿದ್ದ ಕಾನಾನ್ಯರು ಆಟಾದ್ ಎಂಬ ಕಣದಲ್ಲಿ ನಡೆದ ಗೋಳಾಟವನ್ನು ನೋಡಿ - ಐಗುಪ್ತ್ಯರಿಗೆ ಬಂದಿರುವ ಈ ಶೋಕವು ಬಹುವಿಶೇಷವಾಗಿದೆ ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ ಆಬೇಲ್‍ಮಿಚ್ರಯೀಮ್ ಎಂದು ಹೆಸರಾಯಿತು. ಇದು ಯೊರ್ದನ್ ಹೊಳೆಯಿಂದ ಆಚೆಯಿದೆ.
Kannada Bible (KNCL) BSI 2016
ಆ ನಾಡಿನ ಜನರಾದ ಕಾನಾನ್ಯರು ಆಟಾದ್ ಕಣದಲ್ಲಿ ನಡೆದ ಶೋಕಾಚರಣೆಯನ್ನು ನೋಡಿ, “ಈಜಿಪ್ಟಿನವರಿಗೆ ಒದಗಿ ಇರುವ ಈ ಶೋಕ ಬಹು ವಿಶೇಷವಾದುದು!” ಎಂದರು. ಈ ಕಾರಣ ಜೋರ್ಡನ್ ನದಿಯಾಚೆ ಇರುವ ಆ ಸ್ಥಳಕ್ಕೆ ‘ಆಬೇಲ್ ಮಿಚ್ರಯೀಮ್’ ಎಂದು ಹೆಸರಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇಶದ ನಿವಾಸಿಗಳಾದ ಕಾನಾನ್ಯರು ಆಟಾದ್ ಕಣದಲ್ಲಿ ಆಗುತ್ತಿದ್ದ ದುಃಖವನ್ನು ಕಂಡಾಗ, “ಇದು ಈಜಿಪ್ಟಿನವರಿಗೆ ಘೋರವಾದ ದುಃಖ,” ಎಂದು ಹೇಳಿದರು. ಆದ್ದರಿಂದ ಅದಕ್ಕೆ ಆಬೇಲ್ ಮಿಚ್ರಯೀಮ್ ಎಂದು ಹೆಸರಾಯಿತು. ಅದು ಯೊರ್ದನಿನ ಆಚೆ ಇದೆ.