Genesis 50:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತಂದೆಯನ್ನು ಸಮಾಧಿ ಮಾಡಿದನಂತರ ಯೋಸೇಫನೂ ಅವನ ಅಣ್ಣತಮ್ಮಂದಿರೂ ಅವನ ತಂದೆಯ ಉತ್ತರಕ್ರಿಯೆಗಾಗಿ ಅವನೊಂದಿಗೆ ಹೋಗಿದ್ದವರೆಲ್ಲರೂ ಈಜಿಪ್ಟಿಗೆ ಹಿಂತಿರುಗಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಂದೆಗೆ ಸಮಾಧಿ ಮಾಡಿದ ಮೇಲೆ ಯೋಸೇಫನೂ ಅವನ ಅಣ್ಣತಮ್ಮಂದಿರೂ ತಂದೆಯ ಉತ್ತರ ಕ್ರಿಯೆಗೋಸ್ಕರ ಜೊತೆಯಲ್ಲಿ ಹೋಗಿದ್ದವರೆಲ್ಲರೂ ಐಗುಪ್ತಕ್ಕೆ ಹಿಂದಿರುಗಿ ಬಂದರು.
Kannada BSI Bible 2016
ಯೋಸೇಫನು ತನ್ನ ತಂದೆಯನ್ನು ಹೂಣಿಟ್ಟ ಮೇಲೆ ತನ್ನ ಸಹೋದರರ ಸಂಗಡಲೂ ತನ್ನ ತಂದೆಯನ್ನು ಹೂಣಿಡುವದಕ್ಕಾಗಿ ಅವನ ಸಂಗಡ ಹೋದವರೆಲ್ಲರ ಸಂಗಡಲೂ ಐಗುಪ್ತಕ್ಕೆ ತಿರಿಗಿ ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಂದೆಗೆ ಸಮಾಧಿಮಾಡಿದ ಮೇಲೆ ಯೋಸೇಫನೂ ಅವನ ಅಣ್ಣತಮ್ಮಂದಿರೂ ಅವನ ತಂದೆಯ ಉತ್ತರಕ್ರಿಯೆಗೋಸ್ಕರ ಜೊತೆಯಲ್ಲಿ ಹೋಗಿದ್ದವರೆಲ್ಲರೂ ಐಗುಪ್ತಕ್ಕೆ ಹಿಂದಿರುಗಿ ಬಂದರು.
Kannada Bible (KNCL) BSI 2016
ತಂದೆಯನ್ನು ಸಮಾಧಿಮಾಡಿದ ಮೇಲೆ ಜೋಸೆಫನೂ ಅವನ ಅಣ್ಣತಮ್ಮಂದಿರೂ ಆ ಶವಸಂಸ್ಕಾರಕ್ಕಾಗಿ ಅವನ ಜೊತೆಯಲ್ಲಿ ಹೋಗಿದ್ದ ಎಲ್ಲರೂ ಈಜಿಪ್ಟಿಗೆ ಹಿಂದಿರುಗಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಸೇಫನು ತನ್ನ ತಂದೆಯನ್ನು ಹೂಳಿದ ಮೇಲೆ, ತನ್ನ ಸಹೋದರರ ಸಂಗಡವೂ, ತನ್ನ ತಂದೆಯನ್ನು ಹೂಳುವುದಕ್ಕಾಗಿ ಅವನ ಸಂಗಡ ಹೋದವರೆಲ್ಲರೂ ಈಜಿಪ್ಟಿಗೆ ತಿರುಗಿ ಬಂದರು.