Genesis 50:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಕೋಬನು ಸತ್ತಮೇಲೆ, ಯೋಸೇಫನ ಸಹೋದರರು ಕಳವಳಗೊಂಡರು. ಅವರು “ನಾವು ಮಾಡಿದ ಕಾರ್ಯಕ್ಕೆ ಯೋಸೇಫನು ಇನ್ನು ಮೇಲೆ ನಮ್ಮನ್ನು ದ್ವೇಷಿಸುವನೇ?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಸೇಫನ ಅಣ್ಣತಮ್ಮಂದಿರು ತಂದೆ ಸತ್ತದ್ದನ್ನು ಕಂಡು, “ಒಂದು ವೇಳೆ ಯೋಸೇಫನು ನಮ್ಮನ್ನು ದ್ವೇಷಿಸಿ ನಾವು ಅವನಿಗೆ ಮಾಡಿದ ಎಲ್ಲಾ ಕೇಡಿಗೆ ಪ್ರತಿಯಾಗಿ ನಮಗೆ ಶಿಕ್ಷೆಯನ್ನು ಕೊಡಬಹುದು” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
Kannada BSI Bible 2016
ತಮ್ಮ ತಂದೆ ಸತ್ತುಹೋದದ್ದನ್ನು ಯೋಸೇಫನ ಸಹೋದರರು ನೋಡಿ--ಒಂದು ವೇಳೆ ಯೋಸೇಫನು ನಮ್ಮನ್ನು ಹಗೆಮಾಡಿ ನಾವು ಅವನಿಗೆ ಮಾಡಿದ್ದ ಎಲ್ಲಾ ಕೇಡಿಗೆ ನಿಶ್ಚಯವಾಗಿ ಪ್ರತೀಕಾರ ಮಾಡಾನು ಎಂದು ಅಂದುಕೊಂಡು
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಸೇಫನ ಅಣ್ಣತಮ್ಮಂದಿರು ತಂದೆ ಸತ್ತದ್ದನ್ನು ಕಂಡು - ಒಂದು ವೇಳೆ ಯೋಸೇಫನು ನಮ್ಮನ್ನು ದ್ವೇಷಿಸಿ ನಾವು ಅವನಿಗೆ ಮಾಡಿದ ಎಲ್ಲಾ ಕೇಡಿಗೆ ಪ್ರತಿಯಾಗಿ ಪೂರಾ ಶಿಕ್ಷೆಯನ್ನು ಕೊಟ್ಟಾನು ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡು ಯೋಸೇಫನಿಗೆ -
Kannada Bible (KNCL) BSI 2016
ತಂದೆ ಸತ್ತ ಬಳಿಕ ಜೋಸೆಫನ ಅಣ್ಣತಮ್ಮಂದಿರು, “ಜೋಸೆಫನು ಬಹುಶಃ ನಮ್ಮನ್ನು ದ್ವೇಷಿಸಿಯಾನು! ನಾವು ಅವನಿಗೆ ಮಾಡಿದ ಎಲ್ಲ ಹಾನಿಗೆ ಪ್ರತಿಯಾಗಿ ಶಿಕ್ಷಿಸಿಯಾನು,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಮ್ಮ ತಂದೆ ಸತ್ತು ಹೋದ ಮೇಲೆ ಯೋಸೇಫನ ಸಹೋದರರು, “ಒಂದು ವೇಳೆ ಯೋಸೇಫನು ನಮ್ಮನ್ನು ಹಗೆಮಾಡಿ, ನಾವು ಅವನಿಗೆ ಮಾಡಿದ್ದ ಎಲ್ಲಾ ಕೇಡಿಗಾಗಿ ನಿಶ್ಚಯವಾಗಿ ಪ್ರತೀಕಾರಮಾಡಬಹುದು,” ಎಂದುಕೊಂಡು,