Genesis 50:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಸೇಫನು ತನ್ನ ತಂದೆಯ ಶವವನ್ನು ಸಿದ್ಧಪಡಿಸಲು ತನ್ನ ಸೇವಕರಾದ ವೈದ್ಯರಿಗೆ ಹೇಳಿದನು. ಆ ವೈದ್ಯರು ಯಾಕೋಬನ ಶರೀರವನ್ನು ಸಮಾಧಿಮಾಡಲು ಸಿದ್ಧಪಡಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಯೋಸೇಫನು ತನ್ನ ಸೇವಕರಾದ ವೈದ್ಯರಿಗೆ, “ನನ್ನ ತಂದೆಯ ಶವವನ್ನು ಸುಗಂಧ ದ್ರವ್ಯಗಳಿಂದ ತುಂಬಿ ಸಿದ್ಧಪಡಿಸಿರಿ” ಎಂದು ಅಪ್ಪಣೆ ಕೊಡಲು ಅವರು ಇಸ್ರಾಯೇಲನ ಶವವನ್ನು ಸುಗಂಧ ದ್ರವ್ಯಗಳಿಂದ ತುಂಬಿದರು.
Kannada BSI Bible 2016
ಯೋಸೇಫನು ತನ್ನ ತಂದೆಗೆ ಸುಗಂಧ ದ್ರವ್ಯವನ್ನು ಹಾಕಬೇಕೆಂದು ತನ್ನ ದಾಸರಾದ ವೈದ್ಯರಿಗೆ ಅಪ್ಪಣೆಕೊಡಲು ಅವರು ಇಸ್ರಾಯೇಲನಿಗೆ ಸುಗಂಧ ದ್ರವ್ಯವನ್ನು ಹಾಕಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಅವನು ತನ್ನ ಸೇವಕರಾದ ವೈದ್ಯರಿಗೆ - ನನ್ನ ತಂದೆಯ ಶವವನ್ನು ಸುಗಂಧದ್ರವ್ಯಗಳಿಂದ ತುಂಬಿ ಸಿದ್ಧಪಡಿಸಿರಿ ಎಂದು ಅಪ್ಪಣೆಕೊಡಲು ಅವರು ಹಾಗೆಯೇ ಮಾಡಿದರು.
Kannada Bible (KNCL) BSI 2016
ತರುವಾಯ ತನ್ನ ಸೇವಕರಲ್ಲಿ ಶವಲೇಪಕರಾದವರಿಗೆ, “ನನ್ನ ತಂದೆಯ ಶವವನ್ನು ಸುಗಂಧ ದ್ರವ್ಯಗಳಿಂದ ಲೇಪಿಸಿ ಸಿದ್ಧಪಡಿಸಿರಿ,” ಎಂದು ಅಪ್ಪಣೆಕೊಟ್ಟನು. ಅವರು ಹಾಗೆಯೇ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಸೇಫನು ತನ್ನ ತಂದೆ ಇಸ್ರಾಯೇಲನಿಗೆ ಸುಗಂಧದ್ರವ್ಯವನ್ನು ಹಾಕಬೇಕೆಂದು ತನ್ನ ದಾಸರಾದ ವೈದ್ಯರಿಗೆ ಅಪ್ಪಣೆಕೊಟ್ಟನು.