Genesis 50:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಸೇಫನು ಜೀವದಿಂದಿದ್ದ ಕಾಲದಲ್ಲಿ, ಎಫ್ರಾಯೀಮನು ಮಕ್ಕಳನ್ನೂ ಮೊಮ್ಮಕ್ಕಳನ್ನೂ ಪಡೆದನು. ಅವನ ಮಗನಾದ ಮನಸ್ಸೆಗೆ ಮಾಕೀರನೆಂಬ ಗಂಡುಮಗನು ಹುಟ್ಟಿದನು. ಯೋಸೇಫನು ಮಾಕೀರನ ಮಕ್ಕಳನ್ನೂ ನೋಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಎಫ್ರಾಯೀಮನ ಮಕ್ಕಳ ಮೊಮ್ಮಕ್ಕಳನ್ನು ಅಂದರೆ ಮೂರನೇ ತಲೆಮಾರಿನವರೆಗೂ ನೋಡಿದನು. ಮತ್ತು ಮನಸ್ಸೆಯ ಮಗನಾದ ಮಾಕೀರನಿಗೂ ಮಕ್ಕಳು ಹುಟ್ಟಿದಾಗ ಅವರೂ ಯೋಸೇಫನ ಮಡಿಲಿನಲ್ಲಿಯೇ ಬೆಳೆದರು. ಅವರನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡನು.
Kannada BSI Bible 2016
ಯೋಸೇಫನು ಎಫ್ರಾಯಾಮಿನ ಮರಿ ಮೊಮ್ಮಕ್ಕ ಳನ್ನೂ ನೋಡಿದನು. ಮನಸ್ಸೆಯ ಮಗನಾದ ಮಾಕೀ ರನ ಮಕ್ಕಳು ಸಹ ಯೋಸೇಫನ ತೊಡೆಯ ಮೇಲೆಯೇ ಬೆಳೆದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಎಫ್ರಾಯೀಮನ ಮಕ್ಕಳ ಮೊಮ್ಮಕ್ಕಳನ್ನು ನೋಡಿದನು; ಮತ್ತು ಮನಸ್ಸೆಯ ಮಗನಾದ ಮಾಕೀರನಿಗೂ ಮಕ್ಕಳು ಹುಟ್ಟಿದಾಗ ಯೋಸೇಫನು ಅವರನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡನು.
Kannada Bible (KNCL) BSI 2016
ಎಫ್ರಯಿಮನ ಮಕ್ಕಳ ಮೊಮ್ಮಕ್ಕಳನ್ನೂ ನೋಡಿದನು. ಮನಸ್ಸೆಯ ಮಗನಾದ ಮಾಕೀರನಿಗೂ ಮಕ್ಕಳು ಹುಟ್ಟಿದಾಗ ಜೋಸೆಫನು ಅವರನ್ನೂ ತನ್ನ ಮಡಲಿಗೆ ಬರಮಾಡಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಸೇಫನು ಎಫ್ರಾಯೀಮನ ಮರಿಮೊಮ್ಮಕ್ಕಳನ್ನೂ ಕಂಡನು. ಮನಸ್ಸೆಯ ಮಗ ಮಾಕೀರನ ಮಕ್ಕಳೂ ಸಹ ಯೋಸೇಫನ ತೊಡೆಯ ಮೇಲೆಯೇ ಬೆಳೆದರು.