Genesis 50:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೋಸೇಫನು ತನ್ನ ಜನರಿಗೆ ಪ್ರಮಾಣ ಮಾಡಬೇಕೆಂದು ಕೇಳಿಕೊಂಡನು. ಯೋಸೇಫನು, “ದೇವರು ನಿಮ್ಮನ್ನು ಈ ದೇಶದಿಂದ ಹೊರಗೆ ನಡೆಸಿದಾಗ ನನ್ನ ಮೂಳೆಗಳನ್ನು ನಿಮ್ಮೊಂದಿಗೆ ತೆಗೆದುಕೊಂಡು ಹೋಗುವಿರೆಂದು ನೀವು ಪ್ರಮಾಣ ಮಾಡಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಯೋಸೇಫನು ಇಸ್ರಾಯೇಲನ ಮಕ್ಕಳಿಗೆ, “ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಬರಿಸುವನು. ಆಗ ನೀವು ನನ್ನ ಶವವನ್ನು ನಿಮ್ಮ ಸಂಗಡ ಹೊತ್ತುಕೊಂಡು ಹೋಗಬೇಕು” ಎಂದು ಅವರಿಂದ ಪ್ರಮಾಣಮಾಡಿಸಿದನು.
Kannada BSI Bible 2016
ಯೋಸೇಫನು ಇಸ್ರಾಯೇಲನ ಮಕ್ಕಳಿಗೆ--ದೇವರು ನಿಮ್ಮನ್ನು ನಿಶ್ಚಯವಾಗಿ ದರ್ಶಿಸುವನು. ಆಗ ನನ್ನ ಎಲುಬುಗಳನ್ನು ಇಲ್ಲಿಂದ ತಕ್ಕೊಂಡು ಹೋಗಬೇಕೆಂದು ಪ್ರಮಾಣ ಮಾಡಿಸಿದನು.ಯೋಸೇಫನು ನೂರ ಹತ್ತು ವರುಷದವನಾಗಿ ಸತ್ತನು. ಅವರು ಅವನಿಗೆ ಸುಗಂಧದ್ರವ್ಯವನ್ನು ಹಾಕಿ ಐಗುಪ್ತದಲ್ಲಿ ಪೆಟ್ಟಿಗೆ ಯೊಳೆಗೆ ಇಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಯೋಸೇಫನು ಇಸ್ರಾಯೇಲನ ಮಕ್ಕಳಿಗೆ - ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಬರಿಸುವನು; ಆಗ ನೀವು ನನ್ನ ಶವವನ್ನು ನಿಮ್ಮ ಸಂಗಡ ಹೊತ್ತುಕೊಂಡು ಹೋಗಬೇಕೆಂದು ಹೇಳಿ, ಹಾಗೆಯೇ ಮಾಡುತ್ತೇವೆಂಬದಾಗಿ ಅವರಿಂದ ಪ್ರಮಾಣ ಮಾಡಿಸಿದನು.
Kannada Bible (KNCL) BSI 2016
ಇದೂ ಅಲ್ಲದೆ ಜೋಸೆಫನು ಆ ಇಸ್ರಯೇಲನ ಮಕ್ಕಳಿಗೆ, “ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಕಾಪಾಡಲು ಬರುವರು; ಆಗ ನೀವು ನನ್ನ ಶವವನ್ನು ನಿಮ್ಮ ಸಂಗಡ ಹೊತ್ತುಕೊಂಡು ಹೋಗಬೇಕು,” ಎಂದು ಹೇಳಿ, “ಹಾಗೆಯೇ ಮಾಡುತ್ತೇನೆ,” ಎಂಬುದಾಗಿ ಅವರಿಂದ ಪ್ರಮಾಣ ಮಾಡಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಸೇಫನು ಇಸ್ರಾಯೇಲನ ಮಕ್ಕಳಿಗೆ, “ದೇವರು ನಿಶ್ಚಯವಾಗಿ ನಿಮಗೆ ಸಹಾಯ ಮಾಡುವರು. ಆಗ ನನ್ನ ಎಲುಬುಗಳನ್ನು ಇಲ್ಲಿಂದ ತೆಗೆದುಕೊಂಡು ಹೋಗಬೇಕು,” ಎಂದು ಪ್ರಮಾಣ ಮಾಡಿಸಿದನು.