Genesis 50:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಸೇಫನು ನೂರಹತ್ತನೆಯ ವರ್ಷದವನಾಗಿದ್ದಾಗ ಸತ್ತುಹೋದನು. ಈಜಿಪ್ಟಿನಲ್ಲಿ ವೈದ್ಯರು ಅವನ ಶರೀರವನ್ನು ಸಮಾಧಿ ಮಾಡಲು ಸಿದ್ಧಪಡಿಸಿ, ಶವಪೆಟ್ಟಿಗೆಯಲ್ಲಿ ಹಾಕಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಸೇಫನು ನೂರಹತ್ತು ವರ್ಷದವನಾಗಿ ಪ್ರಾಣ ಬಿಟ್ಟನು. ಅವನ ಶವಕ್ಕೆ ಸುಗಂಧದ್ರವ್ಯಗಳನ್ನು ತುಂಬಿ ಐಗುಪ್ತ ದೇಶದೊಳಗೆ ಅದನ್ನು ಪೆಟ್ಟಿಗೆಯಲ್ಲಿ ಇರಿಸಿದರು.
Kannada BSI Bible 2016
ಯೋಸೇಫನು ನೂರ ಹತ್ತು ವರುಷದವನಾಗಿ ಸತ್ತನು. ಅವರು ಅವನಿಗೆ ಸುಗಂಧದ್ರವ್ಯವನ್ನು ಹಾಕಿ ಐಗುಪ್ತದಲ್ಲಿ ಪೆಟ್ಟಿಗೆ ಯೊಳೆಗೆ ಇಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಸೇಫನು ನೂರಹತ್ತು ವರುಷದವನಾಗಿ ಸತ್ತನು. ಅವನ ಶವಕ್ಕೆ ಸುಗಂಧದ್ರವ್ಯಗಳನ್ನು ತುಂಬಿ ಐಗುಪ್ತದೇಶದೊಳಗೆ ಅದನ್ನು ಪೆಟ್ಟಿಗೆಯಲ್ಲಿ ಇರಿಸಿದರು.
Kannada Bible (KNCL) BSI 2016
ಜೋಸೆಫನು ಈಜಿಪ್ಟ್ ದೇಶದಲ್ಲಿ ತನ್ನ ನೂರಹತ್ತನೇ ವರ್ಷದಲ್ಲಿ ಸತ್ತನು. ಅವನ ಶವಕ್ಕೆ ಸುಗಂಧದ್ರವ್ಯಗಳನ್ನು ಲೇಪಿಸಿ, ಅದನ್ನು ಒಂದು ಪೆಟ್ಟಿಗೆಯಲ್ಲಿ ಇರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಸೇಫನು ನೂರಹತ್ತು ವರ್ಷದವನಾಗಿ ಈಜಿಪ್ಟ್ ದೇಶದಲ್ಲಿ ಸತ್ತನು. ಅವರು ಅವನಿಗೆ ಸುಗಂಧದ್ರವ್ಯವನ್ನು ಹಾಕಿ, ಈಜಿಪ್ಟಿನಲ್ಲಿ ಪೆಟ್ಟಿಗೆಯೊಳಗೆ ಇಟ್ಟರು.