Genesis 50:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಜಿಪ್ಟಿನವರು ಆ ಶರೀರವನ್ನು ವಿಶೇಷವಾದ ರೀತಿಯಲ್ಲಿ ನಲವತ್ತು ದಿನಗಳವರೆಗೆ ಸಿದ್ಧಪಡಿಸಿದರು. ಬಳಿಕ ಈಜಿಪ್ಟಿನವರು ಯಾಕೋಬನಿಗಾಗಿ ಎಪ್ಪತ್ತು ದಿನಗಳವರೆಗೆ ಗೋಳಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಲ್ವತ್ತು ದಿನಗಳು ಸುಗಂಧದ್ರವ್ಯಗಳನ್ನು ತುಂಬುವ ಪದ್ಧತಿಯಿರುವುದರಿಂದ ಅಷ್ಟು ದಿನ ಸಿದ್ಧಪಡಿಸುತ್ತಾ ಇದ್ದರು. ಐಗುಪ್ತರು ಅವನಿಗೋಸ್ಕರ ಎಪ್ಪತ್ತು ದಿನ ಶೋಕಾಚರಣೆಯಲ್ಲಿದ್ದರು.
Kannada BSI Bible 2016
ನಾಲ್ವತ್ತು ದಿವಸಗಳು ಅವನಿಗೆ ಸಂಪೂರ್ಣವಾದವು. ಯಾಕಂದರೆ ಸುಗಂಧ ದ್ರವ್ಯವನ್ನು ತುಂಬಿಸಿದವರಿಗೆ ದಿನಗಳು ಹೀಗೆ ಸಂಪೂರ್ಣವಾಗಬೇಕು. ಇದಲ್ಲದೆ ಐಗುಪ್ತ್ಯರು ಅವನಿಗಾಗಿ ಎಪ್ಪತ್ತು ದಿವಸ ದುಃಖಪಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾಲ್ವತ್ತು ದಿನಗಳು ಸುಗಂಧದ್ರವ್ಯಗಳನ್ನು ತುಂಬುವ ಪದ್ಧತಿಯಿರುವದರಿಂದ ಅಷ್ಟು ದಿವಸ ಸಿದ್ಧಪಡಿಸುತ್ತಾ ಇದ್ದರು. ಐಗುಪ್ತ್ಯರು ಅವನಿಗೋಸ್ಕರ ಎಪ್ಪತ್ತು ದಿನಗಳವರೆಗೂ ಗೋಳಾಡಿದರು.
Kannada Bible (KNCL) BSI 2016
ಪದ್ಧತಿಯ ಪ್ರಕಾರ ನಲವತ್ತು ದಿನಗಳು ಸುಗಂಧ ದ್ರವ್ಯಗಳನ್ನು ಲೇಪಿಸಬೇಕಾಗಿತ್ತು. ಅಷ್ಟು ದಿನಗಳವರೆಗೂ ಅವನಿಗೋಸ್ಕರ ಈಜಿಪ್ಟಿನವರಿಂದ ಶೋಕಾಚರಣೆ ಇತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ವೈದ್ಯರು ಇಸ್ರಾಯೇಲನಿಗೆ ನಲವತ್ತು ದಿನಗಳವರೆಗೆ ಸುಗಂಧದ್ರವ್ಯಗಳ ಲೇಪನ ಮಾಡಿದರು. ಅದಕ್ಕಾಗಿ ಅಷ್ಟು ಸಮಯ ಬೇಕಾಗಿತ್ತು. ಇದಲ್ಲದೆ ಈಜಿಪ್ಟಿನವರು ಅವನಿಗಾಗಿ ಎಪ್ಪತ್ತು ದಿವಸ ದುಃಖಪಟ್ಟರು.