Genesis 50:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಪ್ಪತ್ತು ದಿನಗಳಾದ ಮೇಲೆ ಯೋಸೇಫನು ಫರೋಹನ ಅಧಿಕಾರಿಗಳಿಗೆ, “ದಯವಿಟ್ಟು ಇದನ್ನು ಫರೋಹನಿಗೆ ತಿಳಿಸಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶೋಕಾಚರಣೆಯು ಮುಗಿದ ನಂತರ ಯೋಸೇಫನು ಫರೋಹನ ಪರಿವಾರದವರಿಗೆ, “ದಯವಿಟ್ಟು ನೀವು ಫರೋಹನ ಬಳಿಗೆ ಹೋಗಿ ಈ ವಿಷಯವನ್ನು ಮನಮುಟ್ಟುವಂತೆ ಮಾಡಿ,
Kannada BSI Bible 2016
ಅವ ನಿಗಾಗಿ ದುಃಖಿಸುವ ದಿನಗಳು ಮುಗಿದ ಮೇಲೆ ಯೋಸೇಫನು ಫರೋಹನ ಮನೆಯವರಿಗೆ--ನಾನು ನಿಮ್ಮ ಕಣ್ಣುಗಳ ಮುಂದೆ ಕೃಪೆ ಹೊಂದಿದ್ದರೆ ಫರೋಹನ ಕಿವಿಗಳಲ್ಲಿ ಈ ಮಾತು ಹೇಳಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗೋಳಾಡುವ ದಿನಗಳು ಮುಗಿದನಂತರ ಯೋಸೇಫನು ಫರೋಹನ ಮನೆಯವರ ಬಳಿಗೆ ಹೋಗಿ - ನನ್ನ ತಂದೆಯು ತಾನು ಕಾನಾನ್‍ದೇಶದಲ್ಲಿ ಸಿದ್ಧಮಾಡಿಕೊಂಡಿರುವ ಸ್ಥಳದಲ್ಲಿಯೇ ತನಗೆ ಸಮಾಧಿಮಾಡಬೇಕೆಂದು ಸಾಯುವದಕ್ಕಿಂತ ಮೊದಲು ನನ್ನಿಂದ ಪ್ರಮಾಣಮಾಡಿಸಿದನು. ಆದದರಿಂದ ನನ್ನ ಮೇಲೆ ಕಟಾಕ್ಷವಿದ್ದರೆ ನೀವು ಈ ಸಂಗತಿಯನ್ನು ಫರೋಹನಿಗೆ ತಿಳಿಸಿ ನಾನು ಹೋಗಿ ತಂದೆಗೆ ಸಮಾಧಿಮಾಡಿ ಬರುವದಕ್ಕೆ ಅಪ್ಪಣೆ ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ ಅಂದನು.
Kannada Bible (KNCL) BSI 2016
ದುಃಖದ ದಿನಗಳು ಕಳೆದ ನಂತರ ಜೋಸೆಫನು ಫರೋಹನ ಪರಿವಾರದವರಿಗೆ, “ದಯವಿಟ್ಟು ನೀವು ಫರೋಹನ ಬಳಿಗೆ ಹೋಗಿ ಈ ವಿಷಯವನ್ನು ಮನಮುಟ್ಟುವಂತೆ ಮಾಡಿ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನಿಗಾಗಿ ದುಃಖಿಸುವ ದಿನಗಳು ಮುಗಿದ ಮೇಲೆ ಯೋಸೇಫನು ಫರೋಹನ ಆಸ್ಥಾನದವರಿಗೆ, “ನಾನು ನಿಮ್ಮ ಕಣ್ಣುಗಳ ಮುಂದೆ ದಯೆ ಹೊಂದಿದ್ದೇಯಾದರೆ, ಫರೋಹನ ಕಿವಿಗಳಲ್ಲಿ ಈ ಮಾತು ಹೇಳಬೇಕು.