Genesis 50:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಸೇಫನ ಕುಟುಂಬದಲ್ಲಿದ್ದ ಜನರು ಮತ್ತು ಅವನ ಸಹೋದರರು ಅವನೊಂದಿಗೆ ಹೋದರು. ಅವನ ತಂದೆಯ ಕುಟುಂಬದವರೆಲ್ಲ ಯೋಸೇಫನೊಂದಿಗೆ ಹೋದರು. (ಮಕ್ಕಳು ಮತ್ತು ಪ್ರಾಣಿಗಳು ಮಾತ್ರ ಗೋಷೆನ್ ಪ್ರಾಂತ್ಯದಲ್ಲಿ ಉಳಿದುಕೊಂಡರು.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಸೇಫನ ಮನೆಯವರೆಲ್ಲರೂ, ಅಣ್ಣತಮ್ಮಂದಿರೂ, ತಂದೆಯ ಮನೆಯವರೆಲ್ಲರೂ ಹೋದರು. ಅವರು ತಮ್ಮ ಹೆಂಡತಿ ಮಕ್ಕಳನ್ನು ಕುರಿದನಗಳನ್ನು ಮಾತ್ರ ಗೋಷೆನ್ ಸೀಮೆಯಲ್ಲಿ ಬಿಟ್ಟು ಹೋದರು.
Kannada BSI Bible 2016
ಯೋಸೇಫನ ಮನೆಯವರೆಲ್ಲರೂ ಅವನ ಸಹೋದ ರರೂ ಅವನ ತಂದೆಯ ಮನೆಯವರೂ ಹೋದರು. ಅವರ ಮಕ್ಕಳನ್ನೂ ಕುರಿದನಗಳನ್ನೂ ಮಾತ್ರ ಗೋಷೆನ್ ಸೀಮೆಯಲ್ಲಿ ಬಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಐಗುಪ್ತದೇಶದ ಮುಖ್ಯಸ್ಥರೆಲ್ಲರೂ ಯೋಸೇಫನ ಮನೆಯವರೆಲ್ಲರೂ ಅಣ್ಣತಮ್ಮಂದಿರೂ ತಂದೆಯ ಮನೆಯವರೆಲ್ಲರೂ ಹೋದರು. ಅವರು ತಮ್ಮ ಹೆಂಡತಿ ಮಕ್ಕಳನ್ನೂ ಕುರಿದನಗಳನ್ನೂ ಮಾತ್ರ ಗೋಷೆನ್ ಸೀಮೆಯಲ್ಲಿ ಬಿಟ್ಟು ಹೋದರು.
Kannada Bible (KNCL) BSI 2016
ಜೋಸೆಫನ ಮನೆಯವರೆಲ್ಲರು, ಅಣ್ಣತಮ್ಮಂದಿರು, ತಂದೆಯ ಮನೆಯವರೆಲ್ಲರು ಹೋದರು. ತಮ್ಮ ಮಡದಿಮಕ್ಕಳನ್ನೂ ಕುರಿದನಗಳನ್ನೂ ಮಾತ್ರ ಗೋಷೆನ್ ಪ್ರಾಂತ್ಯದಲ್ಲಿ ಬಿಟ್ಟುಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಸೇಫನ ಮನೆಯವರೆಲ್ಲರೂ ಅವನ ಸಹೋದರರೂ ಅವನ ತಂದೆಯ ಮನೆಯವರೆಲ್ಲರೂ ಹೋದರು. ಅವರ ಮಕ್ಕಳನ್ನೂ, ಕುರಿದನಗಳನ್ನೂ ಮಾತ್ರ ಗೋಷೆನ್ ಪ್ರಾಂತದಲ್ಲಿ ಬಿಟ್ಟರು.