Genesis 50:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಗಂಡಸರು ಯೋಸೇಫನೊಂದಿಗೆ ರಥಗಳಲ್ಲಿ ಮತ್ತು ಕುದುರೆಗಳ ಮೇಲೆ ಹೋದರು. ಅದು ಬಹಳ ದೊಡ್ಡ ಗುಂಪಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಅವನ ಸಂಗಡ ರಥಗಳೂ, ಕುದುರೆಗಳೂ ಸಹ ಹೋದವು. ಯೋಸೇಫನ ಹಿಂದೆ ಹೊರಟು ಹೋದವರು ಬಹು ಮಂದಿಯಾಗಿದ್ದರು.
Kannada BSI Bible 2016
ರಥಗಳೂ ರಾಹುತರೂ ಅವನ ಸಂಗಡ ಹೊರಟುಹೋದರು.ಆ ಸಮೂಹವು ಬಹಳ ದೊಡ್ಡದಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಅವನ ಸಂಗಡ ರಥಗಳೂ ಕುದುರೆಗಳೂ ಸಹ ಹೋದವು. ಹೊರಟುಹೋದವರು ಬಹು ಮಂದಿ.
Kannada Bible (KNCL) BSI 2016
ಅವನ ಸಂಗಡ ರಥಗಳೂ ಕುದುರೆಸವಾರರೂ ಸಹ ಇದ್ದರು. ಹೀಗೆ ದೊಡ್ಡ ಜನಸಮೂಹವೇ ಅವನೊಂದಿಗೆ ಹೋಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರಥಗಳೂ, ರಾಹುತರೂ ಅವನ ಸಂಗಡ ಹೊರಟು ಹೋದರು. ಸಮೂಹವು ಬಹಳ ದೊಡ್ಡದಾಗಿತ್ತು.