Genesis 6:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ಭೂಮಿಯ ಕಡೆಗೆ ನೋಡಿದಾಗ ಜನರಿಂದ ಅದು ಕೆಟ್ಟುಹೋಗಿರುವುದನ್ನು ಕಂಡನು. ಎಲ್ಲೆಲ್ಲೂ ಹಿಂಸೆ ತುಂಬಿಕೊಂಡಿತ್ತು; ಜನರು ದುಷ್ಟರಾಗಿಯೂ ಕ್ರೂರಿಗಳಾಗಿಯೂ ತಮ್ಮ ಜೀವಿತವನ್ನು ಕೆಡಿಸಿಕೊಂಡಿದ್ದರು. (Verses 11-12)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟ ನಡತೆಯಿಂದ ದೋಷಿಗಳಾಗಿದ್ದರು. ಹಿಂಸೆ ಮತ್ತು ಅನ್ಯಾಯ ಭೂಮಿಯನ್ನು ತುಂಬಿಕೊಂಡಿತ್ತು.
Kannada BSI Bible 2016
ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟು ಹೋಗಿದ್ದರು; ಭೂಮಿಯು ಬಲಾತ್ಕಾರದಿಂದ ತುಂಬಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಭೂಲೋಕದವರು ದೇವರ ದೃಷ್ಟಿಗೆ ಕೆಟ್ಟುಹೋಗಿದ್ದರು; ಅನ್ಯಾಯವು ಲೋಕವನ್ನು ತುಂಬಿಕೊಂಡಿತ್ತು.
Kannada Bible (KNCL) BSI 2016
ಜಗತ್ತು ದೇವರ ದೃಷ್ಟಿಯಲ್ಲಿ ಕೆಟ್ಟುಹೋಗಿತ್ತು. ಹಿಂಸಾಚಾರದಿಂದ ತುಂಬಿತುಳುಕುತ್ತಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟು ಹೋಗಿದ್ದರು. ಹಿಂಸಾಚಾರವು ಲೋಕವನ್ನು ತುಂಬಿಕೊಂಡಿತ್ತು.