Genesis 6:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನಗೋಸ್ಕರ ಒಂದು ನಾವೆಯನ್ನು ತುರಾಯಿ ಮರದಿಂದ ತಯಾರಿಸು. ಆ ನಾವೆಯಲ್ಲಿ ಕೋಣೆಗಳನ್ನು ಮಾಡು. ಇಡೀ ನಾವೆಗೆ ಒಳಭಾಗದಲ್ಲೂ ಹೊರಭಾಗದಲ್ಲೂ ರಾಳವನ್ನು ಹಚ್ಚು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ನಿನಗೋಸ್ಕರ ತುರಾಯಿ ಮರದಿಂದ ನಾವೆಯನ್ನು ಮಾಡಿಕೋ; ಅದರಲ್ಲಿ ತುಂಬ ಕೋಣೆಗಳು ಇರಬೇಕು; ಒಳಕ್ಕೂ ಹೊರಕ್ಕೂ ರಾಳವನ್ನು ಹಚ್ಚು.
Kannada BSI Bible 2016
ನೀನು ಗೋಫೆರ್‌ ಮರದಿಂದ ನಾವೆಯನ್ನು ಮಾಡಿಕೊಂಡು ಆ ನಾವೆಯಲ್ಲಿ ಕೋಣೆಗಳನ್ನು ಮಾಡು; ಅದರ ಹೊರಭಾಗಕ್ಕೂ ಒಳಭಾಗಕ್ಕೂ ರಾಳವನ್ನು ಹಚ್ಚು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ತುರಾಯಿ ಮರದಿಂದ ನಾವೆಯನ್ನು ಮಾಡಿಕೋ; ಅದರಲ್ಲಿ ತುಂಬ ಕೋಣೆಗಳು ಇರಬೇಕು; ಒಳಕ್ಕೂ ಹೊರಕ್ಕೂ ರಾಳವನ್ನು ಹಚ್ಚು.
Kannada Bible (KNCL) BSI 2016
ನೀನು ತುರಾಯಿಮರದಿಂದ ನಾವೆಯೊಂದನ್ನು ಮಾಡಿಕೊ; ಅದರ ತುಂಬ ಕೊಠಡಿಗಳಿರಲಿ; ಅದರ ಒಳಕ್ಕೂ ಹೊರಕ್ಕೂ ರಾಳಪದಾರ್ಥವನ್ನು ಹಚ್ಚು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ನಿನಗೋಸ್ಕರವಾಗಿ ತುರಾಯಿ ಮರದಿಂದ ನಾವೆಯನ್ನು ಮಾಡಿಕೋ; ಅದರಲ್ಲಿ ಕೋಣೆಗಳನ್ನು ಮಾಡು, ಅದರ ಒಳಭಾಗಕ್ಕೂ ಹೊರಭಾಗಕ್ಕೂ ರಾಳವನ್ನು ಹಚ್ಚು.