Genesis 6:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನೀನು ತಯಾರಿಸುವ ನಾವೆಯು ನಾನೂರೈವತ್ತು ಅಡಿ ಉದ್ದವಾಗಿಯೂ ಎಪ್ಪತ್ತೈದು ಅಡಿ ಅಗಲವಾಗಿಯೂ ನಲವತ್ತೈದು ಅಡಿ ಎತ್ತರವಾಗಿಯೂ ಇರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಅದನ್ನು ಮಾಡಬೇಕಾದ ವಿಧಾನ ಹೇಗೆಂದರೆ, ಅದು ಮುನ್ನೂರು ಮೊಳ ಉದ್ದವೂ, ಐವತ್ತು ಮೊಳ ಅಗಲವೂ, ಮೂವತ್ತು ಮೊಳ ಎತ್ತರವೂ ಉಳ್ಳದ್ದಾಗಿರಬೇಕು.
Kannada BSI Bible 2016
ನೀನು ಅದನ್ನು ಮಾಡತಕ್ಕ ಮಾದರಿಯು ಇದೇ; ನಾವೆಯ ಉದ್ದವು ಮುನ್ನೂರು ಮೊಳ ಅಗಲ ಐವತ್ತು ಮೊಳ ಎತ್ತರ ಮೂವತ್ತು ಮೊಳ ಇರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಅದನ್ನು ಮಾಡಬೇಕಾದ ವಿಧಾನ ಹೇಗಂದರೆ - ಅದು ಮುನ್ನೂರು ಮೊಳ ಉದ್ದವೂ ಐವತ್ತು ಮೊಳ ಅಗಲವೂ ಮೂವತ್ತು ಮೊಳ ಎತ್ತರವೂ ಉಳ್ಳದ್ದಾಗಿರಬೇಕು.
Kannada Bible (KNCL) BSI 2016
ಅದನ್ನು ಹೀಗೆ ಮಾಡು: ಅದರ ಉದ್ದ ಮುನ್ನೂರು ಮೊಳ, ಅಗಲ ಐವತ್ತು ಮೊಳ, ಎತ್ತರ ಮೂವತ್ತು ಮೊಳ ಇರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಅದನ್ನು ಈ ರೀತಿಯಾಗಿ ಮಾಡತಕ್ಕದ್ದು: ನಾವೆಯ ಉದ್ದವು ಸುಮಾರು ಒಂದುನೂರ ಮೂವತ್ತೈದು ಮೀಟರ್, ಅದರ ಅಗಲ ಇಪ್ಪತ್ತಮೂರು ಮೀಟರ್, ಅದರ ಎತ್ತರ ಹದಿನಾಲ್ಕು ಮೀಟರ್ ಇರಬೇಕು.