Genesis 6:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕಿಟಕಿಯ ಮೇಲ್ಛಾವಣಿಗೆ ಹದಿನೆಂಟು ಇಂಚು ಕೆಳಗಿರಲಿ. ನಾವೆಯ ಪಾರ್ಶ್ವದಲ್ಲಿ ಬಾಗಿಲಿರಲಿ. ನಾವೆಯಲ್ಲಿ ಮೇಲಂತಸ್ತು ಮಧ್ಯಂತಸ್ತು ಮತ್ತು ಕೆಳಂತಸ್ತು ಎಂಬ ಮೂರು ಅಂತಸ್ತುಗಳಿರಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರ ಚಾವಣಿಯ ಕೆಳಗೆ ಸುತ್ತಲೂ ಒಂದು ಮೊಳ ಎತ್ತರದ ಕಿಟಕಿಯನ್ನು ಮಾಡಬೇಕು; ಪಕ್ಕದಲ್ಲಿ ಬಾಗಿಲನ್ನಿಡಬೇಕು. ನಾವೆಯಲ್ಲಿ ಒಂದರ ಮೇಲೆ ಒಂದಾಗಿ ಮೂರು ಅಂತಸ್ತುಗಳನ್ನು ಮಾಡಬೇಕು.
Kannada BSI Bible 2016
ನೀನು ನಾವೆಗೆ ಕಿಟಕಿಯನ್ನು ಮಾಡಬೇಕು; ಒಂದು ಮೊಳದೊಳಗೆ ಅದನ್ನು ಮೇಲ್ಭಾಗದಲ್ಲಿ ಮುಗಿಸಬೇಕು. ಅದರ ಪಕ್ಕದಲ್ಲಿ ನಾವೆಯ ಬಾಗಲನ್ನು ಇಡಬೇಕು; ಕೆಳಗಿನದು ಎರಡನೆಯದು ಮೂರನೆಯದು ಎಂಬ ಅಂತಸ್ತುಗಳನ್ನು ಅದಕ್ಕೆ ಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರ ಚಾವಣಿಯ ಕೆಳಗೆ ಸುತ್ತಲೂ ಒಂದು ಮೊಳ ಎತ್ತರದ ಬೆಳಕು ಕಂಡಿಯನ್ನು ಮಾಡಬೇಕು; ಪಕ್ಕದಲ್ಲಿ ಬಾಗಲನ್ನಿಡಬೇಕು. ನಾವೆಯಲ್ಲಿ ಒಂದರ ಮೇಲೆ ಒಂದಾಗಿ ಮೂರು ಅಂತಸ್ತುಗಳನ್ನು ಮಾಡಬೇಕು.
Kannada Bible (KNCL) BSI 2016
ಅದರ ಚಾವಣಿಯ ಕೆಳಗೆ ಸುತ್ತಲೂ ಒಂದು ಮೊಳ ಎತ್ತರದ ಕಿಟಕಿ ಇಡು, ಪಕ್ಕದಲ್ಲಿ ಬಾಗಿಲಿರಲಿ; ಒಂದರ ಮೇಲೆ ಒಂದರಂತೆ ನಾವೆಯಲ್ಲಿ ಮೂರು ಅಂತಸ್ತುಗಳನ್ನು ಮಾಡು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಚಾವಣಿಯನ್ನು ಮಾಡು, ಅದರ ಕೆಳಗೆ ಹದಿನೆಂಟು ಇಂಚಿನ ಕಿಟಕಿಯನ್ನು ನಾವೆಯ ಸುತ್ತಲೂ ಮಾಡಬೇಕು; ಅದರ ಪಕ್ಕದಲ್ಲಿ ನಾವೆಯ ಬಾಗಿಲನ್ನು ಇಡಬೇಕು. ಕೆಳಗಿನದು, ಎರಡನೆಯದು, ಮೂರನೆಯದು ಎಂಬ ಮೂರು ಅಂತಸ್ತುಗಳನ್ನು ಮಾಡಬೇಕು.